ಹುಮನಾಬಾದ್ನಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ಎಸ್ಐಆರ್ ಕುರಿತು ಜನಜಾಗೃತಿ ಮತ್ತು ತರಬೇತಿ ಕಾರ್ಯಾಗಾರವನ್ನು ಮಾಜಿ ಸಚಿವ ರಾಜಶೇಖರ ಬಿ. ಪಾಟೀಲ್ ಉದ್ಘಾಟಿಸಿದರು. ಎಂಎಲ್ಸಿಗಳಾದ ಡಾ. ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಇತರರಿದ್ದರು.
- ಮಾಜಿ ಸಚಿವ ರಾಜಶೇಖರ ಪಾಟೀಲ್ ಕರೆ
- ಹುಮನಾಬಾದ್ನಲ್ಲಿ ತರಬೇತಿ ಕಾರ್ಯಾಗಾರ
ಹುಮನಾಬಾದ್: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಈ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು ಮಾಜಿ ಸಚಿವ ರಾಜಶೇಖರ ಬಿ. ಪಾಟೀಲ ಕರೆ ನೀಡಿದರು.
ಪಟ್ಟಣದ ಬಸವರಾಜ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಆಯೋಜಿಸಿದ್ದ ಎಸ್ಐಆರ್ ಕುರಿತು ಜನಜಾಗೃತಿ, ತರಬೇತಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ರಸುವುದು ಎಲ್ಲರ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಸಲು ನಗರದಲ್ಲಿ "ವಾರ್ ರೂಮ್' ಸ್ಥಾಪಿಸಿ, ಅಲ್ಲಿಂದಲೇ ಸಂಪೂರ್ಣ ಮಾಹಿತಿ ಹಾಗೂ ಸಮನ್ವಯ ಸಾಧಿಸುವ ವ್ಯವಸ್ಥೆ ರೂಪಿಸಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರೇ ಪದ ಶಕ್ತಿ. ಎಸ್ಐಆರ್ ಕಾರ್ಯದಲ್ಲಿ ಉತ್ತಮವಾಗಿ ಕೆಲಸ ಮಾಡುವ ಕಾರ್ಯಕರ್ತರನ್ನು ಗುರುತಿಸಿ ಪದಲ್ಲಿ ಸೂಕ್ತ ಜವಾಬ್ದಾರಿ ಹಾಗೂ ಅವಕಾಶಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಹುಮನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ನಿರೀತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಕಳೆದ ಚುನಾವಣೆಯಲ್ಲಿ ಇನ್ನಷ್ಟು ಸಂಘಟಿತವಾಗಿ ಕಾರ್ಯನಿರ್ವಹಿಸಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳು ಸಿಗುತ್ತಿದ್ದವು ಎಂದರು.
ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠಲರಾವ ಪ್ಯಾಗೆ, ಹಿರಿಯ ಮುಖಂಡ ಕೇಶಪ್ಪ ಬಿರಾದಾರ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಬಿಎಲ್ಒ ಹಾಗೂ ಬಿಎಲ್ಎಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಎಂಎಲ್ಸಿ ಭೀಮರಾವ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್ಮಿಯಾ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಓಂಕಾರ ತುಂಬಾ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ, ಮುಖಂಡರಾದ ವೀರಣ್ಣ ಪಾಟೀಲ, ಲಕ್ಷ್ಮಣರಾವ ಬುಳ್ಳಾ, ಶಿವರಾಜ ಗಂಗಶೆಟ್ಟಿ, ರಮೇಶ ಡಾಕುಳಗಿ, ಕೇಶವರಾವ ತಳಟಕರ, ಕಂಟೆಪ್ಪ ದಾನ, ಸಿದ್ರಾಮ ವಾಗ್ಮಾರೆ, ಪ್ರಭು ತಾಳಮಡಗಿ, ಸತೀಶ ರಾಂಪುರೆ, ದತ್ತಕುಮಾರ ಚಿದ್ರಿ, ಮಹೇಶ ಅಗಡಿ, ಕಲಾವತಿ ರಜಪುತ, ಅಶ್ವಿನಿ ಪಾಟೀಲ್, ಸುರೇಶ ಘಾಂಗ್ರೆ, ರವಿ ಘಾವಳಕರ, ಅಬ್ದುಲ್ ಸಮದ್ ಇತರರಿದ್ದರು.
"
ಎಸ್ಐಆರ್ ಕುರಿತು ಎಚ್ಚರಿಕೆ ಅಗತ್ಯ. ಎಸ್ಐಆರ್ ಮೂಲಕ ಜನಸಾಮಾನ್ಯರ ಹಕ್ಕುಗಳಿಗೆ ಧಕ್ಕೆ ತರುವಂತಹ ವ್ಯವಸ್ಥಿತ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಎಸ್ಐಆರ್ ಮೂಲಕ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸಿದೆ. ಕಾರಣ ರಾಜ್ಯದಲ್ಲಿ ಎಲ್ಲರೂ ಜಾಗೃತರಾಗಿ ಎಸ್ಐಆರ್ ಬಗ್ಗೆ ಎಚ್ಚರಿಕೆ ವಹಿಸಿ ಕಾರ್ಯಕರ್ತರು ಕೆಲಸ ಮಾಡಿ ಜಾಗೃತಿ ಮೂಡಿಸಬೇಕು.
— > ವಿಠಲರಾವ ಪ್ಯಾಗೆ ಬೀದರ್ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ
"
ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಹಲವಾರು ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ಒಂದು ತಿಂಗಳ ಕಾಲ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪ್ರತಿಯೊಬ್ಬರೂ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಗೊಂದಲವಿದ್ದರೆ ಪದ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಬೇಕು.
— > ಡಾ. ಚಂದ್ರಶೇಖರ ಪಾಟೀಲ್, ಎಂಎಲ್ಸಿ