Population Day ಕೊರಟಗೆರೆಯ ಪ್ರಿಯದರ್ಶಿನಿ ಫಾರ್ಮಸಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಪ್ರಾಂಶುಪಾಲ ಮೀನಾಸ್​, ಹಿಮಾಂಶು, ಹಿರಿಯ ಆರೋಗ್ಯ ಸಹಾಯಕ ವಿರೂಪಾಕ್ಷಪ್ಪ, ಎಸ್​.ವಿ. ವೀರೇಶ್​, ಧನಂಜಯ, ಲೋಲಾಕ್ಷಮ್ಮ, ರಘು, ವಿಜಯಲಕ್ಷಿ$್ಮ, ಮದನ್​ ರಾಜ್​, ಚಂದ್ರಶೇಖರ್​ ಇದ್ದರು. 
ರಾಜ್ಯ

ಆರೋಗ್ಯಕರ ಸಮಾಜ ನಿಮಾರ್ಣಕ್ಕೆ ಶ್ರಮಿಸಿ Population Day

ಕೊರಟಗೆರೆ: ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಕಲ್ಯಾಣ ಹಾಗೂ ಆರೋಗ್ಯಕರ ಸಮಾಜ ನಿಮಾರ್ಣಕ್ಕೆ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜ್ಯೋತ್ಸ್ನಾ ರೆಡ್ಡಿ ಹೇಳಿದರು.
ಪಟ್ಟಣದ ಪ್ರಿಯದರ್ಶಿನಿ ಫಾರ್ಮಸಿ ಕಾಲೇಜಿನಲ್ಲಿ ಶುಕ್ರವಾರ Population Day ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಜನಸಂಖ್ಯೆ ಒಂದು ಶಕ್ತಿಯಾಗಿದ್ದರೂ, ಅದರ ಸಮತೋಲನ ಕಾಪಾಡುವುದು ಅತ್ಯಂತ ಅವಶ್ಯಕವಾಗಿದೆ. ಕುಟುಂಬ ಯೋಜನೆ, ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆ, ಮಹಿಳೆಯರ ಸಬಲೀಕರಣ ಹಾಗೂ ಯುವಜನರಲ್ಲಿ ಅರಿವು ಮೂಡಿಸುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು.
ವಿಶ್ವ ಜನಸಂಖ್ಯಾ ದಿನವು ಕೇವಲ ಒಂದು ದಿನದ ಆಚರಣೆಯಾಗದೆ, ಜನಸಂಖ್ಯೆಗೆ ಸಂಬಂಧಿಸಿದ ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ವೇದಿಕೆಯಾಗಿದೆ. ಪ್ರತಿಯೊಂದು ಕುಟುಂಬವೂ ಆರೋಗ್ಯಕರ ಮತ್ತು ಯೋಜಿತ ಜೀವನವನ್ನು ಅಳವಡಿಸಿಕೊಂಡಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.
ಯುವಜನರು ಮತ್ತು ವಿದ್ಯಾರ್ಥಿಗಳು ಕುಟುಂಬ ಕಲ್ಯಾಣ ಯೋಜನೆಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಅರಿವು ಹೊಂದಿ, ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.