Strive to prevent child marriage
ಬುಕ್ಕಾಪಟ್ಟಣ: ಬಾಲ್ಯ ವಿವಾಹ ಒಂದು ಸಾವಾಜಿಕ ಪಿಡುಗಾಗಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಾದ ಅಗತ್ಯವಿದೆ ಎಂದು ಸಾಕ್ಷಿಹಳ್ಳಿ ಪ್ರೌಢಶಾಲೆ ಶಿಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿ
ಮಂಜುನಾಥ್ ಕುಂಬಾರಹಳ್ಳಿ ತಿಳಿಸಿದರು.
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಕುಂಬಾರಹಳ್ಳಿಯಲ್ಲಿ ಬಾಲ್ಯ ವಿವಾಹ ಮತ್ತು ಅದರ ದುಷ್ಪರಿಣಾಮಗಳ ಕುರಿತು ಹಮ್ಮಿಕೊಂಡಿದ್ದ ಗ್ರಾವಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಾತನಾಡಿ, ಧರ್ಮಸ್ಥಳ ಸಂಸ್ಥೆಯು ಶಿಕ್ಷಣ, ಅಭಿವೃದ್ಧಿ, ಪರಿಸರ ಸಂರಕ್ಷಣೆ, ಮಹಿಳಾ ಸಬಲೀಕರಣ, ಗ್ರಾಮೀಣ ಸಬಲೀಕರಣ, ಕೃಷಿ ಅಭಿವೃದ್ಧಿ, ಸ್ವಯಂ ಉದ್ಯೋಗ, ಬಡತನ ನಿರ್ಮೂಲನೆ, ಜ್ಞಾನ ವಿಕಾಸ, ಆರೋಗ್ಯ ಸವಾನತೆ, ಆರ್ಥಿಕ, ಸಾವಾಜಿಕ ಸುಧಾರಣೆಯಂತಹ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಜನರ ಜೀವನದ ಸುಧಾರಣೆಗೆ ಶ್ರಮಿಸುತ್ತಿದೆ ಎಂದರು.
ಬಾಲ್ಯ ವಿವಾಹವನ್ನು ನಡೆಸುತ್ತಿರುವವರು ಮತ್ತು ಬೆಂಬಲಿಸುವವರು ಕಾನೂನಿನ ಪ್ರಕಾರ ಶಿಕ್ಷರ್ಹರಾಗುತ್ತಾರೆ.
ಬಾಲ್ಯ ವಿವಾಹಗಳಿಂದ ಹೆಣ್ಣು ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಲ್ಯದಲ್ಲಿ ಮದುವೆಯಾದವರು ವಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಗಾಗುತ್ತಿದ್ದು, ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಪಾಲಕರು ಮತ್ತು ಸಮುದಾಯದಲ್ಲಿ ಅರಿವು ಮೂಡಿಸಬೇಕಾಗಿದೆ ಎಂದರು.