ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣ್ಯರು ಉಪಸ್ಥಿತರಿದ್ದರು. ನಾಚಪ್ಪ, ರೀತು ಸಿಂಗ್, ಕೋಮಲಾ, ರೈಮಂಡ್, ಸುಜಾತಾ, ಚೈತ್ರಾ ಇದ್ದರು. 
ರಾಜ್ಯ

ಪ್ಲಾಸ್ಟಿಕ್ ಬಳಸದಂತೆ ವಿದ್ಯಾರ್ಥಿಗಳಿಗೆ ಸಲಹೆ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಪುರಸಭೆ ಆರೋಗ್ಯಾಧಿಕಾರಿ ಕೋಮಲಾ
  • ಸರ್ಕಾರಿ ಪದವಿ ಪೂರ್ವ ಕಾಲೇಜು
ವಿರಾಜಪೇಟೆ: ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪುರಸಭೆ ಹಮ್ಮಿಕೊಂಡಿದ್ದು, ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಕೈ ಬಿಡಬೇಕು ಎಂದು ಪುರಸಭೆ ಆರೋಗ್ಯಾಧಿಕಾರಿ ಕೋಮಲಾ ಹೇಳಿದರು.
ವಿಶ್ವ ಪರಿಸರ ದಿನ ಪ್ರಯುಕ್ತ ಪುರಸಭೆ ವತಿಯಿಂದ ಪರಿಸರ ಕಾಳಜಿ ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ವಿಷಯ ಕುರಿತು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಮಾತನಾಡಿದರು. ಪ್ಲಾಸ್ಟಿಕ್‌ನಿಂದ ಲೆಕ್ಕವಿಲ್ಲದಷ್ಟು ಪ್ರಾಣಿಗಳು ಜೀವ ಕಳೆದುಕೊಂಡಿವೆ. ವಿದ್ಯಾವಂತರು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ತರಕಾರಿ, ಹಾಲು ಹಾಗೂ ಇತರ ದಿನಬಳಕೆಯ ಸಾಮಗ್ರಿಗಳನ್ನು ತರಲು ಪ್ಲಾಸ್ಟಿಕ್ ಬ್ಯಾಗ್ ಬಿಟ್ಟು ಬಟ್ಟೆ ಬ್ಯಾಗ್‌ಗಳನ್ನು ಬಳಸುವ ಮೂಲಕ ಪರಿಸರವನ್ನು ಸ್ವಚ್ಛವಾಗಿ ಇರುವಂತೆ ಮಾಡಬೇಕು ಎಂದು ಹೇಳಿದರು.
ಪುರಸಭೆಯ ಮುಖ್ಯಾಧಿಕಾರಿ ನಾಚಪ್ಪ ಹಾಗೂ ಪರಿಸರ ಇಂಜಿನಿಯರ್ ರೀತು ಸಿಂಗ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪುರಸಭೆ ವ್ಯವಸ್ಥಾಪಕಿ ಸುಜಾತಾ, ಸಿಬ್ಬಂದಿ ಕವಿತಾ, ಭೂಮಿಕಾ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೈಮಂಡ್ ಇತರರಿದ್ದರು.