Students need good values ​​and education. 
ರಾಜ್ಯ

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ಅಗತ್ಯ

ಕನಕಪುರ: ವಿದ್ಯಾರ್ಥಿಗಳ ಆಕರ್ಷಣೆಗೆ ಒಳಗಾಗದೆ ಪಾಲಕರು ಹಾಗೂ ಗುರುಗಳ ಆಶಯ ಈಡೇರಿಸುವ ದಾರಿಯಲ್ಲಿ ಸಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಯಪ್ರಕಾಶ್ ಹೇಳಿದರು.
ಡಾ.ಬಿ.ಆರ್.ಆಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸೋಮವಾರ ಬೆಸಗರಹಳ್ಳಿ ಕರಿಯಪ್ಪ ಶ್ರೀಮತಿ ಸರೋಜಮ್ಮ ಚಾರಿಟಬಲ್ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ಪ್ರೋತ್ಸಾಹಧನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ಮುಖ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಿಕ್ಕಿರುವ ಸವಲತ್ತು ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ಧಮ್ಮದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆ ಸಮಯದಲ್ಲಿ ಸಮಯ ವ್ಯಯಿಸದೆ ಗುರಿ ಸಾಧಿಸುವತ್ತ ಗಮನ ನೀಡಬೇಕು. ಬಿಡುವಿನ ಸಮಯದಲ್ಲೂ ಓದುವ ಹವ್ಯಾಸ ರೂಢಿಸಿಕೊಳ್ಳುವ ಜತೆಗೆ ಮಹನೀಯರ ಜೀವನ ಚರಿತ್ರೆಗಳನ್ನು ಓದಬೇಕು ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ ವೀಣಾ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವ ಮೂಲಕ ಕ್ಷೇತ್ರದ ಗೌರವ ಹೆಚ್ಚಿಸುವ ಜತೆಗೆ ಮಾನವೀಯ ಮೌಲ್ಯಗಳನ್ನು ರೂಪಿಸಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಬಿಎಸ್‌ಪಿ ಮುಖಂಡ ಹರಿಹರ ಲಿಂಗರಾಜು ಮಾತನಾಡಿದರು.
ಕಾನಿಪ ತಾಲೂಕು ಅಧ್ಯಕ್ಷ ವೆಂಕಟೇಶ್, ನಿಲಯ ಪಾಲಕ ಸತೀಶ್, ಸುನೀಲ್ ಹಾಗೂ ಇತರರಿದ್ದರು.
14 ಕೆಕೆಪಿ 1
ಕನಕಪುರ ಬೆಸಗರಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಯಪ್ರಕಾಶ್, ಧಮ್ಮದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್, ತಾಲೂಕು ಕಸಾಪ ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ ಇತರರಿದ್ದರು.