ಬಸವಕಲ್ಯಾಣದ ಎಸ್​ಎಸ ಕೆ ಬಸವೇಶ್ವರ ಕಲಾ ವಿಜ್ಞಾನ ವಾಣಿಜ್ಯ ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ನಶಾಮುಕ್ತ ಯುವ ವಿಕಸಿತ್​ ಭಾರತ ಸಂಕಲ್ಪ ಅಭಿಯಾನ ನಿಮಿತ್ತ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ವಿಠೋಬಾ ಡೋಣ್ಣೆಗೌಡರ್​ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಚಾರ್ಯ ಡಾ.ಶಿವಕುಮಾರ ಪಾಟೀಲ್​, ಡಾ.ಎಂ.ಜಿ.ಪಾಟೀಲ, ಸುರೇಶ.ಎಚ್​.ಆರ್​, ಮಹಾದೇವ ಡಿ., ಡಾ.ವಿಜಯಕುಮಾರ, ಭೀಮಾಶಂಕರ ಇತರರಿದ್ದರು. 
ರಾಜ್ಯ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಲಿ

ಪ್ರಮುಖ ಮುಖ್ಯಾಂಶಗಳು

  • ಪ್ರಾಚಾರ್ಯ ಡಾ. ಶಿವಕುಮಾರ ಪಾಟೀಲ್​ ಸಲಹೆ
  • ಕಲ್ಯಾಣದಲ್ಲಿ ನಶಾಮುಕ್ತ ಅಭಿಯಾನ
ಬಸವಕಲ್ಯಾಣ: ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನದಿಂದ ದೂರವಿರಬೇಕು ಎಂದು ಎಸ್​ಎಸ್​ಕೆಬಿ ಕಾಲೇಜಿನ ಪ್ರಾಚಾರ್ಯ ಡಾ.ಶಿವಕುಮಾರ ಪಾಟೀಲ್​ ಸಲಹೆ ನೀಡಿದರು.
ನಗರದ ಎಸ್​ಎಸ್​ಕೆ ಬಸವೇಶ್ವರ ಕಲಾ ವಿಜ್ಞಾನ ವಾಣಿಜ್ಯ ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ನಶಾ ಮುಕ್ತ ಯುವ ವಿಕಸಿತ್​ ಭಾರತ ಸಂಕಲ್ಪ ಅಭಿಯಾನ ನಿಮಿತ್ತ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾದಕ ದ್ರವ್ಯ ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಹಾಳು ಮಾಡುವುದರ ಜತೆಗೆ ಕುಟುಂಬದ ನೆಮ್ಮದಿ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು ಎಂದರು.
ದೊಡ್ಡಪ್ಪ ಅಪ್ಪ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ರಾಚಯ್ಯ ಮಠಪತಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು
ಡಾ.ಎಂ.ಜಿ.ಪಾಟೀಲ್​ ಸ್ವಾಗತಿಸಿದರು, ಎನ್​ಸಿಸಿ ಅಧಿಕಾರಿ ಭೀಮಾಶಂಕರ ನಿರೂಪಣೆ ಮಾಡಿದರು. ಪ್ರೊ.ವಿಠೋಬಾ ಡೋಣ್ಣೆಗೌಡರ್​ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕೆಡೆಟ್​ ರೇಣುಕಾ ಪ್ರಾರ್ಥನಾ ಗೀತೆ ಹಾಡಿದರು.
ಎನ್​ಎಸ್​ಎಸ್​ ಅಧಿಕಾರಿಗಳಾದ ಸುರೇಶ.ಎಚ್​.ಆರ್​., ಮಹಾದೇವ ಡಿ, ಐಕ್ಯೂಎಸಿ ಸಂಯೋಜಕ ಡಾ.ವಿಜಯಕುಮಾರ ಇತರರಿದ್ದರು.