bad habits 
ರಾಜ್ಯ

ದುಶ್ಚಟಗಳಿಂದ ವಿದ್ಯಾರ್ಥಿಗಳು ದೂರವಿರಿ

 ಕನಕಪುರ :ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು, ಇದರ ಸೇವನೆಯು ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಪ್ರದೀಪ್‌ಕುಮಾರ್ ಕರೆ ನೀಡಿದರು. 
ತಾಲೂಕಿನ ಕೋಡಿಹಳ್ಳಿ ಗ್ರಾಮದ ಶ್ರೀಮತಿ ಗೌರಮ್ಮ ಮತ್ತು ಡಿ.ಕೆ.ಕೆಂಪೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕಾಲೇಜಿನ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರ ಉತ್ತಮ ಭವಿಷ್ಯಕ್ಕಾಗಿ ವ್ಯಸನಮುಕ್ತ ಸಮಾಜ ನಿರ್ಮಾಣ ಅಗತ್ಯವೆಂದು ಹೇಳಿದರು.bad habits
ಪ್ರಾಂಶುಪಾಲ ಡಾ. ಕೆ.ಟಿ.ವೆಂಕಟೇಶ್ ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಲು ಸಹಕಾರಿಯಾಗುತ್ತವೆ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಆತ್ಮವಿಶ್ವಾಸ ಮತ್ತು ಉತ್ತಮ ನಡವಳಿಕೆಯನ್ನು ಅಳವಡಿಸಿಕೊಂಡು ಮಾದಕ ವ್ಯಸನದಿಂದ ದೂರವಿರಬೇಕೆಂದು ಸಲಹೆ ನೀಡಿದರು.  ಸಮಾಜದಲ್ಲಿ ವ್ಯಸನಮುಕ್ತ ವಾತಾವರಣ ನಿರ್ಮಿಸಲು ಪ್ರತಿ ವಿದ್ಯಾರ್ಥಿಯೂ ಜಾಗೃತಿ ರಾಯಭಾರಿಯಾಗಬೇಕೆಂದು ಕರೆ ನೀಡಿದರು.
ಪ್ರೊ. ಆರ್. ಸುಧಾ, ಪ್ರೊ. ಎನ್. ಪ್ರಿಯಾಂಕ, ಪ್ರೊ. ಎನ್. ಅವಿನಾಶ್, ಪ್ರೊ. ಬಿ.ಎಂ. ರಾಧಾಕೃಷ್ಣ, ಪ್ರೊ. ಚೈತ್ರಾ ಸೇರಿ ಉಪನ್ಯಾಸಕರು, ಕೋಡಿಹಳ್ಳಿ ಠಾಣೆ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
24 ಕನಕಪುರ 1
ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮವನ್ನು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಪ್ರದೀಪ್‌ಕುಮಾರ್ ಉದ್ಘಾಟಿಸಿದರು. ಪ್ರಾಂಶುಪಾಲ ಡಾ. ಕೆ.ಟಿ.ವೆಂಕಟೇಶ್, ಐಕ್ಯೂಎಸಿ ಸಂಚಾಲಕಿ ಪ್ರೊ. ಟಿ.ಆರ್.ನಳಿನಾದೇವಿ, ಡಾ. ಸಂತೋಷಿ, ಪ್ರೊ. ಎಂ. ವಿಶಾಲಾಕ್ಷಿ , ಡಾ. ಜೋಕಿಮ್ ಡಿಸಿಲ್ವ ಇದ್ದರು.