ಯಾದಗಿರಿ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು. 
ರಾಜ್ಯ

ಬಾರದ ಬಸ್ ಬೀದಿಗಿಳಿದ ವಿದ್ಯಾರ್ಥಿಗಳು

ಪ್ರಮುಖ ಮುಖ್ಯಾಂಶಗಳು

  • ಎರಡುವರೆ ಗಂಟೆಗಳ ಕಾಲ ರಸ್ತೆ ತಡೆ
  • ಯಡಹಳ್ಳಿ ಮುಖ್ಯರಸ್ತೆಯಲ್ಲಿ ನಿಂತಿರುವ ಬಸ್
ಯಾದಗಿರಿ : ಸೇಡಂ-ಯಾದಗಿರಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದಿರುವುದು, ವಿದ್ಯಾರ್ಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆ ಇಲ್ಲದಿರುವುದು ಹಾಗೂ ಸಾರಿಗೆ ಇಲಾಖೆ ನಿರ್ಲಕ್ಷ್ಯ ಖಂಡಿಸಿ ಯಡಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಏಕಾಏಕಿ ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಸ್ತೆ ತಡೆ ನಡೆಸುವ ಮೂಲಕ ಭಾರಿ ಪ್ರತಿಭಟನೆ ನಡೆಸಿದರು.
ಬೆಳಗ್ಗೆ ೮ರಿಂದ ಸುಮಾರು ೧೦-೩೦ರವರೆಗೆ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಈ ವೇಳೆ ಸೇಡಂಗೆ ತೆರಳುತ್ತಿದ್ದ ಐದು ಬಸ್‌ಗಳು ಹಾಗೂ ಯಾದಗಿರಿ ಕಡೆಗೆ ಸಂಚರಿಸುತ್ತಿದ್ದ ಮೂರು ಬಸ್‌ಗಳನ್ನು ಸಂಪೂರ್ಣವಾಗಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಹತ್ತಿಕುಣಿ, ಯಡಹಳ್ಳಿ, ಹೊರುಂಚ, ಹೊರುಂಚ ತಾಂಡಾ ಸೇರಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ನಿತ್ಯ ಇದೇ ಮಾರ್ಗದ ಬಸ್‌ಗಳನ್ನು ಅವಲಂಬಿಸಿ, ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ನಿಗದಿತ ವೇಳೆಗೆ ಬಸ್ ಬಾರದಿರುವುದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಾರಿಗೆ ಅಽಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳಾದ ಯೋಹಾನ, ಆಕಾಶ್, ಜಾಕ್ಸನ್, ಮುರಳಿ ಹಾಗೂ ಬಾಬು, ಹಲವು ಬಾರಿ ಸಂಬAಧಪಟ್ಟ ಅಽಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಒದಗಿಸಿ, ನಿಗದಿತ ವೇಳೆಗೆ ಬಸ್‌ಗಳನ್ನು ಸಂಚರಿಸುವAತೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಗಮನಿಸಬೇಕಾದ ಸಂಗತಿಯೆAದರೆ, ಸುಮಾರು ಎರಡೂವರೆ ಗಂಟೆಗಳ ಕಾಲ ಪ್ರತಿಭಟನೆ ನಡೆದರೂ ಸ್ಥಳಕ್ಕೆ ಯಾವುದೇ ಸಂಬAಧಪಟ್ಟ ಸಾರಿಗೆ ಇಲಾಖೆ ಅಥವಾ ಆಡಳಿತಾಽಕಾರಿಗಳು ಆಗಮಿಸದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಯಿತು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಮತ್ತೊಮ್ಮೆ ಎಚ್ಚರಿಕೆ ನೀಡಿದರು.