ಕೊಳ್ಳೇಗಾಲ ಜೆಎಸ್‌ಎಸ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಹಿರಿಯ ವಿದ್ಯಾರ್ಥಿನಿಯರಿಂದ ಕಿರಿಯ ವಿದ್ಯಾರ್ಥಿನಿ ಯರಿಗೆ ಆಯೋಜಿಸಿದ್ದ ಸ್ವಾಗತ ಸಮಾರಂಭಕ್ಕೆ ಲಯನ್ಸ್ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಬಿ.ಎಂ ಪುಟ್ಟಮಾದಪ್ಪ ಚಾಲನೆ ನೀಡಿದರು. ಮಹದೇವು, ಎನ್.ಮಹದೇವಸ್ವಾಮಿ ಇತರರಿದ್ದರು. 
ರಾಜ್ಯ

ಸತತ ಪರಿಶ್ರಮ, ನಿರಂತರ ಅಭ್ಯಾಸದಿಂದ ಯಶಸ್ಸು

ಬಾಲಮುರಳಿಕೃಷ್ಣ
ಕೊಳ್ಳೇಗಾಲ: ಶಿಸ್ತು, ಶ್ರದ್ಧೆ, ಸತತ ಪರಿಶ್ರಮ, ನಿರಂತರ ಅಭ್ಯಾಸದಿಂದ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬಹುದು ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಬಿ.ಎಂ. ಪುಟ್ಟಮಾದಪ್ಪ ತಿಳಿಸಿದರು.
ಪಟ್ಟಣದ ಜೆಎಸ್‌ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಹಿರಿಯ ವಿದ್ಯಾರ್ಥಿನಿಯರಿಂದ ಕಿರಿಯ ವಿದ್ಯಾರ್ಥಿನಿಯರಿಗೆ ಆಯೋಜಿಸಿದ್ದ ಸ್ವಾಗತ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕನಸುಗಳನ್ನು ಸಾಕಾರಗೊಳಿಸಲು ಯೋಜನೆಯನ್ನು ಹಾಕಿಕೊಂಡು ಆ ನಿಟ್ಟಿನಲ್ಲಿ ಆಸಕ್ತಿ, ಶ್ರದ್ಧೆಯಿಂದ ಶ್ರಮವಹಿಸಿ ಅಧ್ಯಯನ ಮಾಡಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಪ್ರಾಂಶುಪಾಲ ಎನ್.ಮಹದೇವಸ್ವಾಮಿ ಮಾತನಾಡಿ, ಇದೊಂದು ಒಳ್ಳೆಯ ಸತ್ ಸಂಪ್ರದಾಯದ ಕಾರ್ಯಕ್ರಮ. ಹಿರಿಯರು ಕಿರಿಯ ವಿದ್ಯಾರ್ಥಿಗಳಿಗೆ ಹೊಸ ವಾತಾವರಣಕ್ಕೆ ಬಂದಾಗ ಅವರಲ್ಲಿ ಇರುವ ಆತಂಕ, ಭಯವನ್ನು ನಿವಾರಿಸಿ, ನಾವೆಲ್ಲ ಒಂದೇ ಎಂಬ ಭಾವನೆ ಮೂಡಿಸುವ ಜತೆಗೆ ಆತ್ಮೀಯತೆ ಬೆಳೆಯಲು ಸಾಧ್ಯವಾಗುತ್ತದೆ. ನೀವು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡು ಸತ್ಪ್ರಜೆಯಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು. ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ, ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿಕೊಂಡು ನಿಮ್ಮ ಜೀವನದ ಗುರಿ ಮುಟ್ಟಬೇಕೆಂದು ತಿಳಿಸಿದರು.
ಉಪನ್ಯಾಸಕ ಎಂ.ಮಹದೇವು ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಸಾಂಸ್ಕೃತಿಕ ಸಮಿತಿ ಸಂಚಾಲಕ ಎಂ.ಯೋಗೀಶ್, ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿನಿಯರು ಇದ್ದರು.