Success through continuous effort 
ರಾಜ್ಯ

ನಿರಂತರ ಪ್ರಯತ್ನದಿಂದ ಯಶಸ್ಸು

ತುಮಕೂರು ಡೆಸ್ಕ್
ಹುಳಿಯಾರು: ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ತಮ್ಮ ಗುರಿ ನಿಗದಿಪಡಿಸಿಕೊಳ್ಳಬೇಕು. ನಿಯಮಿತ ಅಧ್ಯಯನ ಮತ್ತು ಶಿಸ್ತುಬದ್ಧ ತಯಾರಿ ಯಶಸ್ಸಿಗೆ ಸಹಕಾರಿಯಾಗುತ್ತದೆ ಎಂದು ಡಿಎಚ್​ಐ ಅಕಾಡೆಮಿಯ ಲಕ್ಷಿ$್ಮ ತಿಳಿಸಿದರು.
ಸ್ಥಳಿಯ ಬಿ.ಎಂ.ಎಸ್​. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್​ಮೆಂಟ್​ ಸೆಲ್​ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ವೇದಿಕೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಓರಿಯಂಟೇಶನ್​ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ಪರೀಕ್ಷಾ ಪಠ್ಯಕ್ರಮ, ಆಯ್ಕೆ ಪ್ರಕ್ರಿಯೆ ಹಾಗೂ ಪರೀಕ್ಷೆಗಳನ್ನು ಎದುರಿಸುವ ತಂತ್ರಗಳ ಬಗ್ಗೆ ಅರಿವು ಇರಬೇಕು ಎಂದು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ವೀರಣ್ಣ ಮಾತನಾಡಿ, ವಿದ್ಯಾರ್ಥಿ ಜೀವನದ ಈ ಘಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಹೊಂದುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.
ವಿದ್ಯಾವಾರಿಧಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಂಗನಾಥ್​ ಮಾತನಾಡಿ, ಸ್ಪರ್ಧಾತ್ಮಕ ಮನೋಭಾವ, ಆತ್ಮವಿಶ್ವಾಸ ಮತ್ತು ಸತತ ಪ್ರಯತ್ನವೇ ಯಶಸ್ಸಿನ ಕೀಲಿಕೈ ಎಂದರು.