ಅರಕಲಗೂಡು ತಾಲೂಕಿನ ರಾಮನಾಥಪುರ ಕಾವೇರಿ ನದಿಯಲ್ಲಿ ಮಂಗಳವಾರ ಪತ್ತೆಯಾದ ಮೃತ ವ್ಯಕ್ತಿಯ ಶವ ನೋಡಲು ಸೇತುವೆ ಬಳಿ ನೆರೆದಿರುವ ಜನ. 
ರಾಜ್ಯ

ಕಾವೇರಿ ನದಿಗೆ ಹಾರಿ ಆತ್ಮಹತ್ಯೆ

ಪ್ರಮುಖ ಮುಖ್ಯಾಂಶಗಳು

  • ರಾಮನಾಥಪುರದಲ್ಲಿ ಕಾವೇರಿ ನದಿ
  • ವ್ಯಕ್ತಿಯೊಬ್ಬ ಮಂಗಳವಾರ ಆತ್ಮಹತ್ಯೆ
ಅರಕಲಗೂಡು: ತಾಲೂಕಿನ ರಾಮನಾಥಪುರದಲ್ಲಿ ಕಾವೇರಿ ನದಿಗೆ ಹಾರಿ ವ್ಯಕ್ತಿಯೊಬ್ಬ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಸಮೀಪದ ಮರಡಿವೂರು ಗ್ರಾಮದ ನಿವಾಸಿ ನಾಗರಾಜು (45) ಮೃತಪಟ್ಟವರು. ಈ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.