Suicide due to financial problems
ಚಿಕ್ಕಬಳ್ಳಾಪುರ: ದೇವರ ಹೆಸರಿನಲ್ಲಿ ಕೋಟ್ಯಂತರ ರೂ.ಖರ್ಚು ಮಾಡಿ, ಆರ್ಥಿಕ ಸಂಕಷ್ಟಕ್ಕೊಳಗಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸಾವಿಗೆ ಶರಣಾಗಿದ್ದಾನೆ.
ಶಿಡ್ಲಟ್ಟ ತಾಲೂಕಿನ ಹಂಡಿಗನಾಳದ ಲ್ಮನಾರಾಯಣ್ (55). ಚಿಕ್ಕಬಳ್ಳಾಪುರ ತಾಲೂಕಿನ ಗುಂರ್ಗಿಲಹಳ್ಳಿಯ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದ್ದು ವಿಷ ಸೇವಿಸಿ ಮೃತಪಟ್ಟಿರುವುದು ಗೊತ್ತಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿ ದೇವಸ್ಥಾನ ನಿರ್ಮಾಣ, ಅಭಿವೃದ್ಧಿ ಕೆಲಸಗಳ ಹೆಸರಿನಲ್ಲಿ ಕೆಲವರು ಇವರಿಂದ ಜಮೀನು ಮಾರಿದ ಹಣವನ್ನು ಪಡೆದು ವಂಚಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಮನನೊಂದು ಆತ್ಮಹತ್ಯೆಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.