Suicide due to the pain of not having children?
ಚಿಕ್ಕಬಳ್ಳಾಪುರ: ಮದುವೆಯಾಗಿ 4 ವರ್ಷಗಳಾದರೂ ಮಕ್ಕಳಾಗಿಲ್ಲ ಎಂಬ ನೋವಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ತಾಲೂಕಿನ ದರಬೂರು ಗ್ರಾಮದ ರುಚಿತಾ(25) ಮೃತೆ. 4 ವರ್ಷಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ಗ್ರಾಮದ ಕೇಶವ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಆರಂಭದಲ್ಲಿ ದಾಂಪತ್ಯ ಜೀವನ ಚೆನ್ನಾಗಿತ್ತು. ಬಳಿಕ ಇಬ್ಬರ ನಡುವೆ ಮನಸ್ತಾಪಗಳು ಹೆಚ್ಚಾಗಿದ್ದವು ಎನ್ನಲಾಗಿದೆ.
ಇದರ ನಡುವೆ ಮಕ್ಕಳಾಗದಿರುವುದಕ್ಕೆ ಮಾನಸಿಕ ಖಿನ್ನತೆಗೊಳಗಾಗಿದ್ದು, ಸ್ವಲ್ಪ ದಿನ ವಾತಾವರಣ ಬದಲಾದರೆ ಮನಸ್ಥಿತಿ ಸುಧಾರಿಸಬಹುದು ಎಂದು 4 ತಿಂಗಳಿಂದ ತಾಲೂಕಿನ ಮಂಚನಬಲೆ ಗ್ರಾಮದ ಅಜ್ಜಿ ಕಾಂತಮ್ಮ ಮನೆಯಲ್ಲಿ ವಾಸವಾಗಿದ್ದಳು. ಆದರೆ, ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದಿರುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.