ಹುಕ್ಕೇರಿ: ಕರ್ತವ್ಯಲೋಪದಲ್ಲಿ ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೊಳೆಪ್ಪ ಎಚ್. ಅವರನ್ನು ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕರು ಈಚೆಗೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ನಿಯಮಾನುಸಾರ ಕರ್ತವ್ಯ ನಿರ್ವಹಿಸದೇ ಇರುವುದು, ಇಲಾಖೆ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಲರಾಗಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ಉದಾಸೀನತೆ, ಸಿಬ್ಬಂದಿಗಳೊಂದಿಗೆ ಸರಿಯಾದ ಸಂವಹನ ತೋರದಿರುವುದು ಮತ್ತು ವರ್ಗಾವಣೆ ಆದೇಶ ಪಾಲಿಸದಿರುವುದು ಸೇರಿದಂತೆ ಹಲವು ಆರೋಪಗಳ ಮೇರೆಗೆ ತಕ್ಷಣ ಅಮಾನತುಗೊಳಿಸಲಾಗಿದೆ.
ಜು.8ರಂದು ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್. ರಾಜ್ಯಪಾಲರ ಆದೇಶದ ಮೇರೆಗೆ ಅಮಾನತುಗೊಳಿಸಿದ್ದು, ಪ್ರಸ್ತುತ ಇವರ ಹುದ್ದೆಗೆ ರಾಮಮೂರ್ತಿ ಕೆ.ವಿ. ಅವರು ವರ್ಗಾವಣೆಗೊಂಡಿದ್ದಾರೆ.