sharana sahithya conference 
ರಾಜ್ಯ

ಪತ್ರಕರ್ತರ ಸಮುದಾಯಕ್ಕೆ ತಗಡೂರರ ಸೇವೆ ಅನನ್ಯ; ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಶ್ಲಾಘನೆ

ಪ್ರಮುಖ ಮುಖ್ಯಾಂಶಗಳು

  • ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು
ಬೆಂಗಳೂರು:
ಪತ್ರಕರ್ತರ ಸಮುದಾಯಕ್ಕೆ ಧ್ವನಿಯಾಗಿ ದುಡಿಯುತ್ತಿರುವ ಮತ್ತು ವಿಶೇಷವಾಗಿ ಕೋವಿಡ್ ಕಾಲಘಟ್ಟದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಸಲ್ಲಿಸಿದ ಸೇವೆ ಶ್ಲಾಘನೀಯ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ ಅವರು ಸ್ಮರಿಸಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಮಾಧ್ಯಮ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಶರಣ ಸಾಹಿತ್ಯ ಪರಿಷತ್ತಿನ ಸಮ್ಮೇಳನಾಧ್ಯಕ್ಷರಾದ ನಾಡೋಜ ಗೊ.ರು. ಚನ್ನಬಸಪ್ಪ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶಿವಾನಂದ ತಗಡೂರು ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶ್ರೀ ಚನ್ನಬಸವ ಸ್ವಾಮೀಜಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ, ಡಾ. ಅವಿನಾಶ್ ಕವಿ, ಪಾಲನೇತ್ರ ಸೇರಿದಂತೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಗಣ್ಯರು ಉಪಸ್ಥಿತರಿದ್ದರು.

*ಕೋವಿಡ್ ಕಾಲಘಟ್ಟದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಸಲ್ಲಿಸಿದ ಸೇವೆ ಶ್ಲಾಘನೀಯ.

-ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ