ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನಿಲ್, ಚಂದ್ರಾವತಿ, ಸಾವಿತ್ರಿ, ಗಣೇಶ ಇತರರಿದ್ದರು. 
ರಾಜ್ಯ

ಎಸ್‌ಐಆರ್ ನಡೆಯುತ್ತಿರುವ ಗ್ರಾಮಗಳಿಗೆ ತಹಸೀಲ್ದಾರ್ ಭೇಟಿ

ಸಿದ್ದಾಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದ ಅಂಗವಾಗಿ ವಿರಾಜಪೇಟೆ ತಹಸೀಲ್ದಾರ ಪ್ರವೀಣ್ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತದಾರರಿಗೆ ಎನ್ಯುಮರೇಷನ್ ಫಾರಂ (ಇಎಫ್) ವಿತರಣೆ ಕಾರ್ಯವನ್ನು ಗುರುವಾರ ಪರಿಶೀಲಿಸಿದರು.
ಈ ವೇಳೆ ಮತಗಟ್ಟೆ ಅಧಿಕಾರಿಗಳ ಕಾರ್ಯವೈಖರಿಯನ್ನು ಅವಲೋಕಿಸಿದ ತಹಸೀಲ್ದಾರರು, ಮತದಾರರಿಗೆ ನಮೂನೆಗಳನ್ನು ಸಮರ್ಪಕವಾಗಿ ತಲುಪಿಸಿ, ಅಗತ್ಯ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದರು. ಯಾವುದೇ ಅರ್ಹ ಮತದಾರರು ವಂಚಿತರಾಗದಂತೆ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದೆ ಸಂದರ್ಭ ಅಮ್ಮತಿ ಹೋಬಳಿಯ ಕಂದಾಯ ನಿರೀಕ್ಷಕ ಅನಿಲ್ ಹಾಜರಿದ್ದರು.