Take action to implement internal reservation. 
ರಾಜ್ಯ

ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಿ

ತುಮಕೂರು ಡೆಸ್ಕ್
ಪಟ್ಟನಾಯಕನಹಳ್ಳಿ: ಒಳಮೀಸಲಾತಿ ಜಾರಿಗೊಳಿಸದೆ ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳ ನೇಮಕಾತಿ ಮಾಡಬಾರದು, ಏ.24ರಂದು ನಡೆಯುವ ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ತೀಮಾರ್ನ ಕೈಗೊಳ್ಳಬೇಕು ಎಂದು ಆದಿಜಾಂಬವ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಷಡಕ್ಷರಿಮುನಿ ಸ್ವಾಮೀಜಿ ಆಗ್ರಹಿಸಿದರು.
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಯುವಕರು ಆಯೋಜಿಸಿದ್ದ ಅಂಬೇಡ್ಕರ್​ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣ, ಸಂಘಟನೆ, ಒಗ್ಗಟ್ಟಿನ ಹೋರಾಟದಿಂದ ಮಾತ್ರ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದರು.
ಕನಕ ಬ್ಯಾಂಕ್​ ಅಧ್ಯಕ್ಷ ಬಿ.ಕೆ.ಮಂಜುನಾಥ್​ ಮಾತನಾಡಿ, ಸರ್ಕಾರ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸುವ ಮೂಲಕ, ಸಮುದಾಯ ಆರ್ಥಿಕ, ಸಾಮಾಜಿಕ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಅವಕಾಶ ಕಲ್ಪಿಸಬೇಕು. ಒಳಮೀಸಲಾತಿಗಾಗಿ 352 ಕಿ.ಮೀ. ಪಾದಯಾತ್ರೆ ಮಾಡಿದ ಷಡಕ್ಷರಿಮುನಿ ಸ್ವಾಮೀಜಿ ಅವರಿಗೆ ಸಮುದಾಯದ ಬಗ್ಗೆ ಇರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು ಎಂದರು.
ಶಿರಾ ಜೆಡಿಎಸ್​ ನಾಯಕ ಆರ್​.ಉಗ್ರೇಶ್​ ಮಾತನಾಡಿ, ಸಮಾಜದಲ್ಲಿ ಸಮಾನತೆ ಬರಲು ಬಾಬಾ ಸಾಹೇಬ್​ ಅಂಬೇಡ್ಕರ್​ ಅವರು ಕೊಟ್ಟ ಸಂವಿಧಾನ ಕಾರಣ ಅವರ ಜನ್ಮ ಜಯಂತಿ ಮನೆಮನೆ ಹಬ್ಬವಾಗಬೇಕು ಎಂದರು.
ಕರ್ನಾಟಕ ದಲಿತ ಸಂಘರ್ಫಿ ಸಮಿತಿ ಜಿಲ್ಲಾಧ್ಯಕ್ಷ ಟೈರ್​ ರಂಗನಾಥ್​ ಮಾತನಾಡಿದರು.