ಮನ್ನಾಎಖೇಳ್ಳಿ ಗ್ರಾಪಂ ಕಚೇರಿಯಲ್ಲಿ ಮಂಗಳವಾರ ಬೀದರ್ ದಣ ಕ್ಷೇ ತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಡೆಯಲು ತುರ್ತು ಕ್ರಮಕೈಗೊಳ್ಳುವ ಬಗ್ಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ತಹಸೀಲ್ದಾರ್ ಮಂಜುನಾಥ ಪಂಚಾಳ, ತಾಪಂ ಇಒ ಲಕ್ಷಿ$್ಮ ಬಿರಾದಾರ ಇದ್ದರು.
- ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಸೂಚನೆ
- ಮನ್ನಾಎಖೇಳ್ಳಿಯಲ್ಲಿ ಅಧಿಕಾರಿಗಳ ಸಭೆ
ಚಿಟಗುಪ್ಪ: ಗ್ರಾಮೀಣ ಪ್ರದೇಶದ ಯಾವುದೇ ಸ್ಥಳದಲ್ಲಿಯೂ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಜಾರಿಗೆ ತರಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು, ಬೋರ್ವೆಲ್ ದುರಸ್ತಿ ಹಾಗೂ ಹೊಸ ನೀರಿನ ಮೂಲಗಳನ್ನು ಗುರುತಿಸುವ ಕಾರ್ಯವನ್ನು ತಣ ಆರಂಭಿಸಬೇಕು ಎಂದು ಬೀದರ್ ದಣ ೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಮನ್ನಾಎಖೇಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮಂಗಳವಾರ ಬೀದರ್ ದಣ ೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಯನ್ನು ತಡೆಯಲು ತುರ್ತು ಕ್ರಮಕೈಗೊಳ್ಳುವ ಬಗ್ಗೆ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ ಸಮಸ್ಯೆ ಪರಿಹರಿಸಲು ಬದ್ಧರಾಗಿರಬೇಕು ಎಂದು ತಿಳಿಸಿದರು.
ನೀರೇ ಜೀವ. ನೀರಿಲ್ಲದೆ ಬದುಕು ಸಾಧ್ಯವಿಲ್ಲ. ಬೇಸಿಗೆಯ ಸಮಯದಲ್ಲಿ ನಮ್ಮ ಗ್ರಾಮ ಮತ್ತು ಪಟ್ಟಣಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವುದು ಹೆಚ್ಚಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಹರಿಸಬೇಕಾಗಿದೆ. ಹೀಗಾಗಿ ಎಲ್ಲ ಅಧಿಕಾರಿಗಳು ಯಾವುದೇ ಗ್ರಾಮದಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಚಿತವಾಗಿಯೇ ನೀರಿನ ಮೂಲಗಳನ್ನು ಪರಿಶೀಲಿಸಿ, ಬೋರ್ವೆಲ್ಗಳ ದುರಸ್ತಿ ಕಾರ್ಯಗಳನ್ನು ತಣ ಕೈಗೊಳ್ಳಬೇಕು. ಹಾಳಾಗಿರುವ ಪಂಪ್, ಮೋಟಾರ್, ಪೈಪ್ಲೈನ್ಗಳನ್ನು ಸರಿಪಡಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡುವ ವ್ಯವಸ್ಥೆಯನ್ನು ಕೂಡ ತಣ ಜಾರಿಗೆ ತರಬೇಕು. ಜನರಿಗೆ ನೀರು ಸಿಗದೇ ಸಂಕಷ್ಟ ಅನುಭವಿಸುವ ಪರಿಸ್ಥಿತಿ ಬರಬಾರದು. ಇದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಗ್ರಾಮ ಪಂಚಾಯಿತಿ, ತಾಲೂಕು ಆಡಳಿತ ಮತ್ತು ಎಲ್ಲ ಸಂಬಂಧಪಟ್ಟ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಾವು ಈ ಸಮಸ್ಯೆಯನ್ನು ಎದುರಿಸಬಹುದುದಾಗಿದೆ. ರಸ್ತೆ, ಕುಡಿಯುವ ನೀರು, ವಿದ್ಯುತ ಸೇರಿ ಯಾವುದೇ ರೀತಿಯ ಮೂಲ ಸೌಕರ್ಯ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದದರು.
ಚಿಟಗುಪ್ಪ ತಹಸೀಲ್ದಾರ್ ಮಂಜುನಾಥ ಪಾಂಚಾಳ, ತಾಪಂ ಇಒ ಲಕ್ಷಿ$್ಮ ಬಿರಾದಾರ ಸೇರಿ ಇತರ ಅಧಿಕಾರಿಗಳು, ಪಿಡಿಒ ಇದ್ದರು.
ಕ್ಷೇತ್ರದ ಸಾರ್ವಜನಿಕರಿಗೂ ಮನವಿ ಮಾಡುತ್ತೇನೆ. ನೀರನ್ನು ವ್ಯರ್ಥ ಮಾಡಬೇಡಿ. ನೀರನ್ನು ಸಂರಸಿ ಜವಾಬ್ದಾರಿಯುತವಾಗಿ ಬಳಸಿ. ನಾವು ಎಲ್ಲರೂ ಸೇರಿ ನೀರನ್ನು ಉಳಿಸಿದರೆ ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು.