ಔರಾದ್ ತಾಲೂಕಿನ ಎಕಲಾರ ತಾಂಡಾದಲ್ಲಿ ಶನಿವಾರ ಡಿಸಿ ಶಿಲ್ಪಾ ಶರ್ಮಾ ನೀರಿನ ಸಮಸ್ಯೆ ಬಗ್ಗೆ ಪರಿಶೀಲಿಸಿದರು. ತಹಸೀಲ್ದಾರ್ ಮಹೇಶ ಪಾಟೀಲ, ತಾಪಂ ಎಡಿ ಶಿವಕುಮಾರ ಘಾಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ರಾಠೋಡ್, ೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ್, ಗಜಾನನ ಮಳ್ಳಾ, ಕಲ್ಪನಾ ಪಾಟೀಲ, ಇತರರಿದ್ದರು.
- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ
- ಔರಾದ್ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ
ಔರಾದ್: ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನ ಸೊರಹಳ್ಳಿ, ಜಂಬಗಿ, ಮಹಾರಾಜವಾಡಿ, ವಿಜಯನಗರ ತಾಂಡಾ, ಎಕಲಾರ ತಾಂಡಾ ಮತ್ತು ಕಿರಗುಣವಾಡಿ ಸೇರಿ ಹಲವು ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿ, ಕುಡಿಯುವ ನೀರಿನ ಲಭ್ಯತೆ, ಪೂರೈಕೆ ವ್ಯವಸ್ಥೆ ಹಾಗೂ ಸಂಗ್ರಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಸ್ಥಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ರಾಮಗಳಲ್ಲಿ ನೀರಿನ ತೊಂದರೆ ಉಂಟಾಗದಂತೆ ತಕ್ಷಣ ಕ್ರಮಕೈಗೊಳ್ಳಬೇಕು. ಪೈಪ್ಲೈನ್ ದುರಸ್ತಿ, ಟ್ಯಾಂಕರ್ ವ್ಯವಸ್ಥೆ, ಬೋರ್ವೆಲ್ಗಳ ನಿರ್ವಹಣೆ ಸೇರಿ ಅಗತ್ಯ ಕ್ರಮಗಳನ್ನು ಶ್ರೀ ಜಾರಿಗೊಳಿಸುವಂತೆ ನಿರ್ದೇಶನ ನೀಡಿದರು.
ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಶ್ರೀ ಪರಿಹಾರ ಒದಗಿಸಬೇಕು ಎಂದು ಅವರು ಹೇಳಿದರು.
ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸರ್ಕಾರದ ಮಟ್ಟದಲ್ಲಿ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಸೋರಳ್ಳಿ ಗ್ರಾಮಕ್ಕೆ ಆಗಮಿಸಿ ಮರಳುವಾಗ ಮಹಿಳೆಯರು ಕಾರ್ ನಿಲ್ಲಿಸಿ, ನಮಗೆ ನೀರಿನ ಹೈರಾಣ ಭಾಳ್ ಆಗ್ತಾಯಿದೆ. ನಿತ್ಯ ಸುಡುಬಿಸಿಲಿನಲ್ಲಿ ಖಾಲಿ ಕೊಡಗಳನ್ನು ಹಿಡಿದು ಹನಿ ನೀರಿಗಾಗಿ ಅಲೆದಾಡುವ ಪ್ರಸಂಗ ಎದುರಾಗಿದೆ. ನೀರು ಇಲ್ಲ, ಹೊಟ್ಟೆ ಅನ್ನ ಕೂಡ ಇಲ್ಲವೆಂದು ತಮ್ಮ ಅಳಲನ್ನು ತೋಡಿಕೊಂಡರು. ಇದಕ್ಕೆ ಸ್ಪಂಧಿಸಿದ ಜಿಲ್ಲಾಧಿಕಾರಿ ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಹಸೀಲ್ದಾರ್ ಮಹೇಶ ಪಾಟೀಲ, ತಾಪಂ ಎಡಿ ಶಿವಕುಮಾರ ಘಾಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ರಾಠೋಡ್, ೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ್, ಕಂದಾಯ ಅಧಿಕಾರಿ ರಾಜಕುಮಾರ, ನರಸಿಂಹ್ಮಲು, ಗಜಾನನ ಮಳ್ಳಾ, ಕಲ್ಪನಾ ಪಾಟೀಲ ಇತರರಿದ್ದರು.