ಬೆಂಗಳೂರಿನ ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಕೆಕೆಆರ್​ಟಿಸಿ ಅಧ್ಯ ಅರುಣಕುಮಾರ ಪಾಟೀಲ್​ ಮಂಗಳವಾರ ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮನವಿಪತ್ರ ಸಲ್ಲಿಸಿದರು. 
ರಾಜ್ಯ

ಕೇಂದ್ರ ಬಸ್​ ನಿಲ್ದಾಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ

ಬಾಬುರಾವ ಯಡ್ರಾಮಿ

ಪ್ರಮುಖ ಮುಖ್ಯಾಂಶಗಳು

  • ಕೆಕೆಆರ್​ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್​ ಮನವಿ
  • ಬೆಂಗಳೂರಿನಲ್ಲಿ ಸಾರಿಗೆ ಸಚಿವರನ್ನು ಭೇಟಿ
ಅಫಜಲಪುರ: ವಿಭಾಗೀಯ ಕೇಂದ್ರ ಕಲಬುರಗಿಯ ಕೇಂದ್ರ ಬಸ್​ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಅರುಣಕುಮಾರ ಪಾಟೀಲ್​ ಒತ್ತಾಯಿಸಿದರು.
ಬೆಂಗಳೂರಿನ ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಹಲವು ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿ ಮಾತನಾಡಿದ ಅವರು, ಸೌಲಭ್ಯ ಕೊರತೆ ಎದುರಿಸುತ್ತಿರುವ ಕಲಬುರಗಿ ಕೇಂದ್ರ ಬಸ್​ ನಿಲ್ದಾಣ ಸಂಪೂರ್ಣ ತೆರವುಗೊಳಿಸಿ, ಅದೇ ಸ್ಥಳದಲ್ಲಿ ಆಧುನಿಕ ಸೌಕರ್ಯ, ತಂತ್ರಾನಾಧಾರಿತ ಡಿಜಿಟಲ್​ ಟಿಕೆಟ್​ ವ್ಯವಸ್ಥೆಯ ಪ್ರಯಾಣಿಕ ಸ್ನೇಹಿ ಬಸ್​ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಕಾಮಗಾರಿಗಾಗಿ ಪ್ರಸಕ್ತ ಸಾಲಿನ ಬಜೆಟ್​ನಲ್ಲಿ 56 ಕೋಟಿ ರೂ. ಮಂಜೂರು ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಬೇಕು ಎಂದು ಕೋರಿದರು.
ಬಳಿಕ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯ ಭರಮಣ್ಣ ಉಪ್ಪಾರ, ವಿಶ್ವಕರ್ಮ ಅಭಿವೃದ್ಧಿ ನಿಗಮ ಅಧ್ಯ ಸುಾನ ಮೂರ್ತಿ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯ ಮಹೇಶ ಎಂ., ಮರಾಠ ಅಭಿವೃದ್ಧಿ ನಿಗಮ ಅಧ್ಯ ಜಿ.ಎಚ್​.ಮರಿಯೋಜಿರಾವ್​ ಅವರನ್ನು ಭೇಟಿಯಾಗಿ ಅಫಜಲಪುರ ಮತೇತ್ರದ ಫಲಾನುಭವಿಗಳಿಗೆ ನಿಗಮಗಳ ವಿವಿಧ ಯೋಜನೆ, ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಿದರು.