ಹುಮನಾಬಾದ್ನಲ್ಲಿ ಸೋಮವಾರ ಡಿವೈಎಸ್ಪಿ ಮಡೋಳಪ್ಪ ಪಿ.ಎಸ್. ವಿವಿಧ ಬ್ಯಾಂಕ್ ಮತ್ತು ಎಟಿಎಂ ಕೇಂದ್ರಗಳಿಗೆ ತೆರಳಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಪಿಎಸ್ಐ ಸುರೇಶಕುಮಾರ ಇತರರಿದ್ದರು.
- ಡಿವೈಎಸ್ಪಿ ಮಡೋಳಪ್ಪ ಪಿ.ಎಸ್. ತಾಕೀತು
- ಹುಮನಾಬಾದ್ನಲ್ಲಿ ವ್ಯವಸ್ಥೆ ಪರಿಶೀಲನೆ
ಹುಮನಾಬಾದ್: ಪಟ್ಟಣದಲ್ಲಿ ಸೋಮವಾರ ಡಿವೈಎಸ್ಪಿ ಮಡೋಳಪ್ಪ ಪಿ.ಎಸ್. ನೇತೃತ್ವದಲ್ಲಿ ಅಧಿಕಾರಿಗಳು ವಿವಿಧ ಬ್ಯಾಂಕ್ ಮತ್ತು ಎಟಿಎಂ ಕೇಂದ್ರಗಳಿಗೆ ತೆರಳಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು.
ಎಸ್ಬಿಐ, ಕೆನರಾ ಇತರ ಬ್ಯಾಂಕ್ಗಳಿಗೆ ಭೇಟಿ ನೀಡಿದ ಅವರು, ಇತ್ತೀಚೆಗೆ ಬ್ಯಾಂಕ್ ವಂಚನೆ, ಕಳ್ಳತನ ಮತ್ತು ಸೈಬರ್ ಅಪರಾಧ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಸಮಗ್ರ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಎಟಿಎಂ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾ, ಸೈರನ್ ಸಮರ್ಪಕ ಕಾರ್ಯನಿರ್ವಹಿಸುತ್ತಿದೆಯೇ? ಭದ್ರತಾ ಸಿಬ್ಬಂದಿ ನಿಯೋಜನೆ, ಅಗ್ನಿಶಾಮಕ ಉಪಕರಣಗಳ ಲಭ್ಯತೆ ಸೇರಿ ವಿವಿಧ ಅಂಶಗಳ ಕುರಿತು ಬ್ಯಾಂಕ್ ವ್ಯವಸ್ಥಾಪಕರಿಂದ ಮಾಹಿತಿ ಪಡೆದುಕೊಂಡರು.
ಸಾರ್ವಜನಿಕರ ಹಣದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಬಗ್ಗೆ ತಣ ಪೊಲೀಸರಿಗೆ ಮಾಹಿತಿ ನೀಡಬೇಕು. ಸೈಬರ್ ವಂಚನೆ ಕುರಿತು ಗ್ರಾಹಕರಲ್ಲಿ ತಿಳಿವಳಿಕೆ ಮೂಡಿಸುವ ಕಾರ್ಯಕ್ಕೂ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಪಿಎಸ್ಐ ಸುರೇಶಕುಮಾರ ಚವ್ಹಾಣ್, ವಿವಿಧ ಬ್ಯಾಂಕ್ ವ್ಯವಸ್ಥಾಪಕರು ಇದ್ದರು.