ಹುಮನಾಬಾದ್ನ ಶಾಸಕರ ಕಚೇರಿಯಲ್ಲಿ ಸೋಮವಾರ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಅಧಿಕಾರಿಗಳ ಸಭೆ ನಡೆಸಿದರು. ತಹಸೀಲ್ದಾರ್ರಾದ ಅಂಜುಮ್ ತಬಸ್ಸುಮ್, ಮಂಜುನಾಥ ಪಂಚಾಳ, ತಾಪಂ ಇಒ ಲಕ್ಷಿ$್ಮ ಬಿರಾದಾರ ಇತರರಿದ್ದರು.
- ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಸೂಚನೆ
- ಹುಮನಾಬಾದ್ನಲ್ಲಿ ಅಧಿಕಾರಿಗಳ ಸಭೆ
ಬೇಸಿಗೆ ಇರುವುದರಿಂದ ೇತ್ರದ ವ್ಯಾಪ್ತಿಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ಹಾಗೂ ಸಾರ್ವಜನಿಕರ ತೊಂದರೆಗಳನ್ನು ತಡೆಯಲು ಅಧಿಕಾರಿಗಳು ತುರ್ತು ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಸೂಚಿಸಿದರು.
ಪಟ್ಟಣದ ಶಾಸಕರ ಆಡಳಿತ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ತಾಲೂಕು ಆಡಳಿತ ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ವಹಿಸುವ ಮೂಲಕ ಸದಾ ಸನ್ನದ್ದರಾಗಿರಬೇಕು. ಈ ನಿಟ್ಟಿನಲ್ಲಿ ರ್ನಿಲಕ್ಷ ವಹಿಸುವವರ ವಿರುದ್ಧ ಮೂಲಾಜಿಲ್ಲದೆ ಕ್ರಮ ವಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಪಂಪ್ ಆಪರೇಟರ್ ಕೊರತೆಯಿಂದ ನೀರಿನ ಸರಬರಾಜು ವ್ಯತ್ಯಯವಾಗುತ್ತಿರುವ ಬಗ್ಗೆ ದೂರುಗಳಿದ್ದು, ಅಗತ್ಯ ಸಿಬ್ಬಂದಿ ನೇಮಕಕ್ಕೆ ತಣ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದರು.
ಬೇಸಿಗೆ ಹಿನ್ನೆಲೆಯಲ್ಲಿ ಬಾಡಿಗೆ ಬೋರ್ವೆಲ್, ಟ್ಯಾಂಕರ್ ಮೂಲಕ ನೀರು ಪೂರೈಕೆ, ಆರ್ಒ ಪ್ಲಾಂಟ್ಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಲಜೀವನ್ ಮಿಷನ್ ಕಾಮಗಾರಿಗಳನ್ನು ಶ್ರೀ ಪೂರ್ಣಗೊಳಿಸಲು ಅಧಿಕಾರಿಗಳು ಗಂಭೀರವಾಗಿ ಕ್ರಮವಹಿಸಬೇಕು. ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಸರಬರಾಜು ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ತಹಸೀಲ್ದಾರ್ ಅಂಜುಮ್ ತಬಸ್ಸುಮ್, ತಾಪಂ ಇಒ ಲಕ್ಷಿ$್ಮ ಬಿರಾದಾರ, ಚಿಟಗುಪ್ಪ ತಹಸೀಲ್ದಾರ್ ಮಂಜುನಾಥ ಪಂಚಾಳ, ಬಸವಕಲ್ಯಾಣ ತಹಸೀಲ್ದಾರ್ ಸೇರಿ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒಗಳು ಇದ್ದರು.
ಕ್ಷೇತ್ರದ ಜನತೆಗೆ ಅಧಿಕಾರಿಗಳು ಸರಿಯಾದ ಸಮಯದಲ್ಲಿ ಸಿಗದೆ ಸುಳ್ಳು ಹೇಳುತ್ತಾ ತಮ್ಮ ಕಚೇರಿಗೆ ಸುತ್ತಾಡಿಸಿಕೊಳ್ಳುವುದು ನನ್ನ ಗಮನಕ್ಕೆ ಬಂದಿದ್ದು, ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು.