ಕಲಬುರಗಿ: ಜಿಲ್ಲೆಯ ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಜರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತರಾಗಿರುವ ವಿದ್ರಾವಕ ಸುದ್ದಿಯು ಮನಸಿನಲ್ಲಿ ತಲ್ಲಣವನ್ನುಂಟುಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಅಮೂಲ್ಯ ಜೀವಗಳು ಅಪಘಾತಕ್ಕೆ ಬಲಿಯಾಗಿರುವುದರ ಬಗ್ಗೆ ನೋವು ವ್ಯಕ್ತಪಡಿಸಿ, " ಭಾರವಾದ ಮನಸ್ಸಿನಿಂದಲೇ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಮೃತರ ಕುಟುಂಬ ವರ್ಗವು ಧೈರ್ಯ ತಂದುಕೊಳ್ಳಬೇಕು ಎಂದಷ್ಟೇ ಈಗ ಹೇಳಬಹುದಾದ ಸಮಾಧಾನದ ಮಾತುಗಳು" ಎಂದು ಪ್ರಿಯಾಂಕ್ ಹೇಳಿದ್ದಾರೆ.
ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಮಾತನಾಡಿದ್ದೇನೆ, ನಾನು ಮತ್ತು ಜಿಲ್ಲಾಡಳಿತವು ಮೃತರ ಕುಟುಂಬದವರ ಅಗತ್ಯ ನೆರವಿಗೆ ಪೂರ್ಣ ಸಹಕಾರ ನೀಡಲಿದ್ದೇವೆ. ಪ್ರೀತಿಪಾತ್ರರ ಅಗಲಿಕೆ ಭರಿಸುವ ಶಕ್ತಿ ಮೃತರ ಕುಟುಂಬ ವರ್ಗಕ್ಕೆ ಸಿಗುವಂತಾಗಲಿ ಎಂದು ಆಶಿಸುತ್ತೇನೆ" ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.