- ರಾಜ್ಯಾದ್ಯಂತ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಸುಸೂತ್ರ
- ಬೆಳಗಿನ ಅವಧಿಯಲ್ಲಿ ಪತ್ರಿಕೆ-1 ಮತ್ತು ಮಧ್ಯಾಹ್ನ ಪತ್ರಿಕೆ-2ರ ಪರೀಕ್ಷೆಗಳು ನಡಯಿತು. ಈ ಬಾರಿ ಎರಡೂ ಪರೀಕ್ಷೆಗಳು ಬಹಳ ಕಠಿಣವಾಗಿದ್ದವು.
- ಸರಿಯಾದ ರೀತಿಯಲ್ಲಿ ಸಿದ್ಧತೆ ನಡೆಸಿದ್ದರೆ ಮಾತ್ರ ಅರ್ಹತೆ ಪಡೆಯಲು ಸಾಧ್ಯ
ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಸುಸೂತ್ರವಾಗಿ ನಡೆಯಿತು.
ಪರೀಕ್ಷಾ ಕೇಂದ್ರಗಳನ್ನು ಸಿಸಿಟಿವಿ ಕಣ್ಗಾವನಲ್ಲಿ ಇಟ್ಟಿದ್ದರಿಂದ ಯಾವುದೇ ಅಕ್ರಮಗಳು ನಡೆದಿಲ್ಲ. ಎಲ್ಲ ಕಡೆಯೂ ಪಾರದರ್ಶಕವಾಗಿ ಮತ್ತು ಕಟ್ಟುನಿಟ್ಟಾಗಿ ಪರೀಕ್ಷೆ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಿನ ಅವಧಿಯಲ್ಲಿ ಪತ್ರಿಕೆ-1 ಮತ್ತು ಮಧ್ಯಾಹ್ನ ಪತ್ರಿಕೆ-2ರ ಪರೀಕ್ಷೆಗಳು ನಡಯಿತು. ಈ ಬಾರಿ ಎರಡೂ ಪರೀಕ್ಷೆಗಳು ಬಹಳ ಕಠಿಣವಾಗಿದ್ದವು. ಹಿಂದಿನ ವರ್ಷಗಳಿಗಿಂತ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದರಿಂದ ಪ್ರಶ್ನೆಗಳು ಕೂಡ ಅಷ್ಟೇ ಕಷ್ಟಕರವಾಗಿದ್ದವು. ಕನಿಷ್ಠ ಅರ್ಹತೆ ಪಡೆಯುವುದು ಕಷ್ಟಸಾಧ್ಯ ಎಂದು ಅಭ್ಯರ್ಥಿ ರಘು ಅನಿಸಿಕೆ ಹಂಚಿಕೊಂಡರು.
ಸರಿಯಾದ ರೀತಿಯಲ್ಲಿ ಸಿದ್ಧತೆ ನಡೆಸಿದ್ದರೆ ಮಾತ್ರ ಅರ್ಹತೆ ಪಡೆಯಲು ಸಾಧ್ಯವಾಗಲಿದೆ. ಆದರೆ, ಕೆಲವೊಂದು ಪ್ರಶ್ನೆಗಳು ಸುಲಭವಾಗಿದ್ದವು. ಹೀಗಾಗಿ, ಅರ್ಹತೆ ಪಡೆಯಬಹುದೆಂಬ ನಿರೀಕ್ಷೆ ಮಾಡಿದ್ದೇನೆ ಎಂದು ತಿಳಿಸಿದರು.
ನಕಲು ಅಭ್ಯರ್ಥಿಗಳಿಗಿಲ್ಲ ಅವಕಾಶ
ರಾಜ್ಯಾದ್ಯಂತ 903 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಅಭ್ಯರ್ಥಿಗಳ ನೈಜತೆ ಪರಿಶೀಲಿಸಲು ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮತ್ತು ೇಸ್ ರೆಕಾಗ್ನಿಷನ್ ತಪಾಸಣೆ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ನಡೆಸುವ ಮೆಟಲ್ ಡಿಟೆಕ್ಟರ್ ತಪಾಸಣೆ, ಡಿಜಿಟಲ್ ಬೆರಳಚ್ಚು ದಾಖಲಿಸುವಿಕೆ ಮತ್ತು ಮುಖ ಗುರುತಿಸುವಿಕೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದರಿಂದ ಅಚ್ಚುಕಟ್ಟಾಗಿ ಪರೀಕ್ಷೆ ನಡೆಯಲು ಸಾಧ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೀ ಉತ್ತರ ಪ್ರಕಟ
ಪತ್ರಿಕೆ-1 ಮತ್ತು 2ರ ಕೀ ಉತ್ತರಗಳನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಒಂದು ವಾರದ ಸಮಯ ನೀಡಲಾಗಿದೆ. ಅದಾದ ನಂತರ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗುತ್ತದೆ. ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಬಾರದಿದ್ದಲ್ಲಿ ಅಂತಿಮವಾಗಿ ಇದನ್ನೇ ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.