the-14th-is-the-birth-anniversary-of-both-these-great-men
ಚಿಕ್ಕನಾಯಕನಹಳ್ಳಿ: ಪಟ್ಟಣದ ತಾಲೂಕು ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕುರಿತು ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಸಾಂಕೇತಿಕವಾಗಿ ಏ.5ರಂದು ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಿಸಿ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಮ್ ಆಚರಿಸಲಾಗುವುದು ಎಂದು ತೀರ್ಮಾನಿಸಲಾಯಿತು.
ಮಹನೀಯರ ಜಯಂತಿ ಅಂಗವಾಗಿ ದಿನಾಂಕ ನಿಗದಿ ಪಡಿಸಿದ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಹಾಗೂ ಬಾಬುಜಗಜೀವನರಾಮ್ ಅವರ ಬಗ್ಗೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವುದು ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದ ಅಭಿವೃದ್ಧಿಗಾಗಿ ಸಮಾಜ ಸೇವೆ ಸಲ್ಲಿಸಿದ ಗಣ್ಯರನ್ನು ಅಭಿನಂದಿಸುವ ಬಗ್ಗೆ ಚರ್ಚಿಸಲಾಯಿತು.
ಏ.14 ರಂದು ಪಟ್ಟಣದ ಕನ್ನಡ ಸಂದ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೂ ಮುನ್ನ ತಾಲೂಕು ಕಚೇರಿಯಿಂದ ಕಾರ್ಯಕ್ರಮ ನಡೆಯುವ ವೇದಿಕೆವರೆಗೂ ಕಲಾತಂಡಗಳೊಂದಿಗೆ ಮೆರವಣಿಗೆ ಆಯೋಜಿಸಲಾಗಿದೆ. ಸಮಾಜ ಕಲ್ಯಾಣಾಧಿಕಾರಿ ಶ್ರೀಧರಮೂರ್ತಿ, ವ್ಯವಸ್ಥಾಪಕ ಕುಮಾರಸ್ವಾಮಿ, ಡಿಎಸ್ಎಸ್ ಮುಖಂಡರಾದ ಬೇವಿನಹಳ್ಳಿ ಚನ್ನಬಸವಯ್ಯ, ತೀರ್ಥಪುರ ಕುಮಾರ್, ಯರೇಕಟ್ಟೆ ರಮೇಶ್, ಯರೇಕಟ್ಟೆ ರಾಮು ಇದ್ದರು.