ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಚೇರಿಯ ಸಹಾಯಕ ಅಧಿಕಾರಿ ಬಿ.ಎಸ್.ಕಡಕಬಾವಿ ಅಧ್ಯಕ್ಷತೆಯಲ್ಲಿ ಹಡಪದ ಅಪ್ಪಣ್ಣ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಹಾಗೂ ಸಮುದಾಯದ ಮುಖಂಡರಾದ ಮಲ್ಲಣ್ಣ ಚೊಳಚಗುಡ್ಡ, ಲಕ್ಷ್ಮಣ ಹಡಪದ, ಎ.ಜಿ.ಹಡಪದ ಇತರರಿದ್ದರು. 
ರಾಜ್ಯ

29ರಂದು ಹಡಪದ ಅಪ್ಪಣ್ಣನವರ ಜಯಂತಿ

ಪ್ರಮುಖ ಮುಖ್ಯಾಂಶಗಳು

  • ಬಿ.ಎಸ್. ಕಡಕಬಾವಿ ಮಾಹಿತಿ
  • ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ
ಬಾಗಲಕೋಟೆ: ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜು. 29ರಂದು ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಅಧಿಕಾರಿ ಬಿ.ಎಸ್.ಕಡಕಬಾವಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಡಪದ ಅಪ್ಪಣ್ಣ ಅವರ ಜೀವನ, ತತ್ವಾದರ್ಶಗಳು ಹಾಗೂ ಸಮಾಜಮುಖಿ ಕೊಡುಗೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಅಂದು ಬೆಳಗ್ಗೆ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ನಂತರ ವೇದಿಕೆ ಕಾರ್ಯಕ್ರಮ ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿಸಲಾಗುತ್ತದೆ.
ಸಮುದಾಯ ಮುಖಂಡರು, ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ ನಿರ್ಮಾಣ ಸೇರಿ ಇತರೆ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಲು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಹಾಗೂ ಸಮುದಾಯದ ಮುಖಂಡರಾದ ಮಲ್ಲಣ್ಣ ಚೊಳಚಗುಡ್ಡ, ಲಕ್ಷ್ಮಣ ಹಡಪದ, ಎ.ಜಿ.ಹಡಪದ, ಎಚ್.ಡಿ.ವೈದ್ಯ ಇತರರಿದ್ದರು.