ಬಂಗಾರಪೇಟೆ: ತಾಲೂಕಿನ ವಿಎಸ್ಎಸ್ಎನ್ ಕಾರ್ಯದರ್ಶಿ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಬಂಗಾರಪೇಟೆ ನ್ಯಾಯಾಲಯ 8ತಿಂಗಳು ಕಾರಾಗೃಹ ಶಿಕ್ಷೆ ಮತ್ತು 6 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
2024ರಲ್ಲಿ ಕಾಮಸಮುದ್ರದ ಗಿರೀಶ್ ಎಂಬುವರಿಗೆ ನೋಟಿಸ್ ಜಾರಿ ಮಾಡಿ ಸಾಲ ಮರುಪಾವತಿ ಮಾಡುವಂತೆ ವಿಸ್ಸೆಸ್ಸೆನ್ ಕಾರ್ಯದರ್ಶಿ ಸೂಚಿಸಿದ್ದರು. ನೋಟಿಸ್ ನೀಡಿದ್ದಕ್ಕೆ ಗಿರಿಶ್ ಸೊಸೈಟಿಗೆ ಆಗಮಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಚಪ್ಪಲಿಯಿಂದ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದ. ಈ ಬಗ್ಗೆ ಕಾರ್ಯದರ್ಶಿ ಕಾಮಸಮುದ್ರ ಪೊಲೀಸ್ ಠಾಣೆಗೆಯಲ್ಲಿ ದೂರು ನೀಡಿದ್ದರಿಂದ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಎಲ್.ರಘು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ವರದಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಂಗಾರಪೇಟೆ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ್ ಅಲಬೂರ್ ಅವರು ಆರೋಪಿಗೆ 8 ತಿಂಗಳ ಸಜೆ ಹಾಗೂ 6 ಸಾವಿರ ರೂ. ದಂಡ ವಿಧಿಸಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕ ಎನ್.ರವಿಕುಮಾರ್ ವಾದ ಮಂಡಿಸಿದ್ದರು.