ಬಸವಕಲ್ಯಾಣದ ಜೈ ಭವಾನಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಒಲಿಂಪಿಯಾಡ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮವನ್ನು ತಹಸೀಲ್ದಾರ್ ಡಾ.ದತ್ತಾತ್ರೇಯ ಗಾದಾ ಉದ್ಘಾಟಿಸಿದರು. ಮುರುಳೀಧರ ಎಚ್.ಎಲ್., ರವೀಂದ್ರ ಇತರರಿದ್ದರು.
- ತಹಸೀಲ್ದಾರ್ ಡಾ.ದತ್ತಾತ್ರೇಯ ಗಾದಾ ಅಭಿಮತ
- ಕಲ್ಯಾಣದಲ್ಲಿ ಪ್ರಮಾಣಪತ್ರ ವಿತರಣೆ
ಬಸವಕಲ್ಯಾಣ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಎದುರಾಗುವ ಸ್ಪರ್ಧಾತ್ಮಕ ಪರೀಕ್ಷೆಗಳು ಯಾವುದೇ ಒತ್ತಡವಿಲ್ಲದೆ ಎದುರಿಸುವಂತಾಗಲೂ ವೃತ್ತಿಪರ ಕಲಿಕೆ ಮತ್ತು ನಾಯಕತ್ವ ಸಂವಹನ ಕೌಶಲ ಅಗತ್ಯವಾಗಿದ್ದು, ಇದು ಬೆಳೆಸಿಕೊಳ್ಳಲು ಸಿಎಸ್ಸಿ ಒಲಿಂಪಿ ಯಾಡ್ ಪರೀಕ್ಷೆ ಸಹಕಾರಿಯಾಗಲಿದೆ ಎಂದು ತಹಸೀಲ್ದಾರ್ ಡಾ.ದತ್ತಾತ್ರೇಯ ಗಾದಾ ಹೇಳಿದರು.
ನಗರದ ತ್ರಿಪುರಾಂತ ಜೈ ಭವಾನಿ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜಿಲ್ಲಾ ಮತ್ತು ತಾಲೂಕು ಘಟಕದಿಂದ ಇತ್ತೀಚೆಗೆ ಆಯೋಜಿಸಿದ್ದ ಒಲಿಂಪಿಯಾಡ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ಸಿಎಸ್ಸಿ ಕಾರ್ಯಕ್ರ ಮವನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ರಾಷ್ಟ್ರ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಇದು ಅವಕಾಶ ಕಲ್ಪಿಸಲಿದೆ ಎಂದರು.
ಟ್ರಸ್ಟ್ ಜಿಲ್ಲಾ ನಿರ್ದೇಶಕ ಮುರುಳೀಧರ ಎಚ್.ಎಲ್. ಮಾತನಾಡಿ, 2025-&26ನೇ ಸಾಲಿನಲ್ಲಿ ಸಿಎಸ್ಸಿ ಒಲಿಂಪಿಯಾಡ್ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಒಟ್ಟು 668 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದಾರೆ. ಹಿಂದಿ ವಿಷಯದಲ್ಲಿ ರಾಜ್ಯಮಟ್ಟಕ್ಕೆ ಪ್ರಥಮೇಶ ಪದ್ಮಾನಂದ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು
ತಾಲೂಕು ಯೋಜನಾಧಿಕಾರಿ ರವೀಂದ್ರ ಮಾತನಾಡಿದರು. ಕಂದಾಯ ನಿರೀಕ್ಷಕ ಅನೀಲಕುಮಾರ ಚಾಂದೆ, ನೋಡಲ್ ಅಧಿಕಾರಿ ಬಸವರಾಜ, ಹಣಕಾಸು ಪ್ರಬಂಧಕ ಸಂತೋಷ, ಅನಿಲಕುಮಾರ ಇತರರು ಪಾಲ್ಗೊಂಡಿದ್ದರು.
"
ಧರ್ಮಸ್ಥಳ ಸಂಸ್ಥೆಯು ಗ್ರಾಮೀಣ ಪ್ರದೇಶದ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಜಿಲ್ಲಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಎದುರಿಸು ವಂತಹ ಸಂದರ್ಭದಲ್ಲಿ ಗ್ರಾಮೀಣ ಮಟ್ಟದಲ್ಲಿಯೇ ಆನ್ಲೈನ್ ಮೂಲಕ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಮ್ಮ ಗ್ರಾಮದಲ್ಲಿಯೇ ಭಾಗವಹಿಸುವಂತೆ ಮಾಡಿಕೊಟ್ಟಿದೆ.
— > ಡಾ.ದತ್ತಾತ್ರೇಯ ಗಾದಾ ತಹಸೀಲ್ದಾರ್ ಬಸವಕಲ್ಯಾಣ