ಶಾಲೆ, ಕಾಲೇಜುಗಳಲ್ಲಿ ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರ ಹಿಂಪಡೆಯಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ತಾಲೂಕು ಸಮಿತಿಯಿಂದ ಹಗರಿಬೊಮ್ಮನಹಳ್ಳಿ ಉಪ ತಹಸೀಲ್ದಾರ್ ಶಿವಕುಮಾರಗೌಡಗೆ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ತಿಪ್ಪೇಸ್ವಾಮಿ, ಚಂದ್ರಮೌಳಿ, ಶಿವಯೋಗಿ, ಕರಿಬಸವರಾಜ, ಲಿಂಗರಾಜ ಯಾದವ್, ಕೊಟ್ರಪ್ಪ, ಗದ್ದಿಕೆರೆ ನಾಗಭೂಷಣ, ಗುರುರಾಜಪ್ಪ, ಎಸ್.ಎಂ.ಕೊಟ್ರಯ್ಯ, ಶ್ರೀಕಾಂತ ಇತರರಿದ್ದರು.
ಹಗರಿಬೊಮ್ಮನಹಳ್ಳಿ: ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ಹಾಗೂ ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರವನ್ನು ತಕ್ಷಣ ಕೈಬಿಡಬೇಕೆಂದು ಹಿಂದೂ ಜನಜಾಗೃತಿ ವೇದಿಕೆ ತಾಲೂಕು ಘಟಕದಿಂದ ಬುಧವಾರ ಉಪ ತಹಸೀಲ್ದಾರ್ ಶಿವಕುಮಾರಗೌಡಗೆ ಮನವಿ ಸಲ್ಲಿಸಲಾಯಿತು.
ಸಮಿತಿ ಸಂಚಾಲಕಿ ಬಿ.ಎಂ.ಪೂಜಾ ಮಾತನಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಪದವಿಪೂರ್ವ ಕಾಲೇಜ್‌ಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿ, ಕೇಸರಿ ಶಾಲು ಧರಿಸುವುದಕ್ಕೆ ಸರ್ಕಾರ ನಿಬರ್ಂಧ ವಿಧಿಸಿರುವ ನಿರ್ಧಾರ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ.
ಸರ್ಕಾರದ ನಿರ್ಧಾರ ಸಮಾನತೆ, ಧರ್ಮನಿರಪೇಕ್ಷತೆ ಹಾಗೂ ಏಕರೂಪದ ಸಮವಸ್ತ್ರ ನೀತಿಗೆ ವಿರುದ್ಧವಾಗಿದೆ ಎಂದು ದೂರಿದರು.