ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ  
ರಾಜ್ಯ

ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಮಳೆಯ ತೀವ್ರ ಕೊರತೆ ಎದುರಾಗಿದ್ದು, ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ರೈತರ ಸಾಲ ಮನ್ನಾ ಕುರಿತಂತೆ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಗಮನಿಸಿದ್ದೇನೆ. ರೈತರಿಗೆ ಈ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸುತ್ತದೋ ಇಲ್ಲವೋ ಎಂಬುದನ್ನು ನೋಡುತ್ತೇವೆ. ಈ ಬಗ್ಗೆ ಸದನದಲ್ಲಿಯೂ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 3 ವರ್ಷದಲ್ಲಿ ರೈತರ ಸಂಕಷ್ಟಕ್ಕೆ ಮಿಡಿಯಲಿಲ್ಲ. ಬರ ಬಂದಾಗ ಸೂಕ್ತ ಪರಿಹಾರ ನೀಡಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂರುವುದು ಬಿಟ್ಟರೆ ಬೇರೆ ಏನೂ ಮಾಡಲಿಲ್ಲ ಎಂದು ಆರೋಪಿಸಿದರು.
ಎಸ್‌ಐಆರ್ ಅನ್ನು ಕೇಂದ್ರ ಸರ್ಕಾರ ನಡೆಸುತ್ತಿಲ್ಲ. ಚುನಾವಣಾ ಆಯೋಗ ನಡೆಸುತ್ತಿದೆ. ರಾಜ್ಯ ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಸಾಂವಿಧಾನಿಕ ಸಂಸ್ಥೆ ಚುನಾವಣಾ ಆಯೋಗದ ಮೇಲೆ ವಿಶ್ವಾಸ ಇಟ್ಟು ಎಸ್‌ಐಆರ್‌ಗೆ ಸಹಕಾರ ನೀಡಲಿ. ಇದಕ್ಕೆ ಕಲ್ಲು ಹಾಕುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದರು.