Kidwai cancer hospital  
ರಾಜ್ಯ

ಉತ್ತಮ ಕ್ಯಾನ್ಸರ್ ಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಹೆಗ್ಗಳಿಕೆ

ಪ್ರಮುಖ ಮುಖ್ಯಾಂಶಗಳು

  • * ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಮಾಹಿತಿ
  • * ದೇಶದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆ ನೀಡುವಲ್ಲಿ 5ನೇ ಸ್ಥಾನ
ಬೆಂಗಳೂರು: ಬಡ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಮತ್ತು ಆರೈಕೆ ಒದಗಿಸುವ ರಾಜ್ಯದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಖಾಸಗಿ ಸಂಸ್ಥೆ 2025ರಲ್ಲಿ ನಡೆಸಿದ ಸಂಶೋಧನಾ ಸಮೀಕ್ಷೆಯಲ್ಲಿ ಕಿದ್ವಾಯಿ ದೇಶದಲ್ಲೇ 5ನೇ ಸ್ಥಾನದಲ್ಲಿದ್ದು, ಸರ್ಕಾರಿ ಆಸ್ಪತ್ರೆಗಳ ಪೈಕಿ 3ನೇ ಸ್ಥಾನ ಪಡೆದುಕೊಂಡಿದೆ.
ಸಂಸ್ಥೆಯಲ್ಲಿ ರೋಬಾಟಿಕ್ ಶಸಚಿಕಿತ್ಸೆ ಒಳಗೊಂಡಂತೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ, ನುರಿತ ತಜ್ಞರನ್ನು ಹೊಂದಿದ್ದು, ವಿಶ್ವದರ್ಜೆಯ ಸೇವೆ ನೀಡಲಾಗುತ್ತಿದೆ. ಪಾಶ್ಚಿಮಾತ್ಯ ದೇಶಗಳಿಗೆ ಹೋಲಿಸಿದರೆ ಇಲ್ಲಿಯೂ ಮುಂದುವರಿದ ತಂತ್ರಜ್ಞಾನ ಆಧಾರಿತ ಸೌಲಭ್ಯ ಅಳವಡಿಸಲಾಗಿದೆ. ಶಿಬಿರಗಳ ಮೂಲಕ ಕ್ಯಾನ್ಸರ್ ಕುರಿತ ಜಾಗೃತಿ, ಆರಂಭಿಕ ಹಂತದಲ್ಲಿ ರೋಗ ಪತ್ತೆಹಚ್ಚುವಿಕೆ ಹಾಗೂ ಚಿಕಿತ್ಸೆಯಲ್ಲಿ ಸಂಸ್ಥೆ ಮುಂಚೂಣಿಯಲ್ಲಿದೆ. ಪೆರಿೆರಲ್ ಕ್ಯಾನ್ಸರ್ ಘಟಕಗಳ ಮೂಲಕ ರೋಗಿಗಳಿಗೆ ಶೀಘ್ರ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆೆ.
ರೋಗಿಗಳನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಬೆಳವಣಿಗೆಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದು, ಈ ಮನ್ನಣೆ ದೊರೆತಿರುವುದು ಸಂಸತ ತಂದಿದೆ. ಇನ್ನಷ್ಟು ಉತ್ತಮ ಸೇವೆ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕ ಡಾ. ಟಿ. ನವೀನ್ ಹರ್ಷ ವ್ಯಕ್ತಪಡಿಸಿದ್ದಾರೆ.