ಸಿರಿಗೇರಿ ಸಮೀಪದ ಬೂದುಗುಪ್ಪ ಗ್ರಾಮದ ಶ್ರೀ ಬಸವೇಶ್ವರ ಸಾಮಾಜಿಕ ಸಾಂಸ್ಕೃತಿಕ ಕಲಾ ಟ್ರಸ್ಟ್ ಕಲಾವಿದರು ಅಯೋಧ್ಯೆಯ ಶ್ರೀರಾಮ ಮಂದಿರ ಆವರಣದಲ್ಲಿ ಕಲಾ ಪ್ರದರ್ಶನ ನೀಡಿದರು.
ಸಿರಿಗೇರಿ: ಶ್ರೀರಾಮನ ಸನ್ನಿಧಿಯಲ್ಲಿ ಕರುನಾಡಿನ ಜನಪದ ಕಲೆಗಳನ್ನು ಪ್ರದರ್ಶಿಸುವ ಅವಕಾಶ ದೊರೆತದ್ದು ನಮ್ಮೆಲ್ಲರ ಸೌಭಾಗ್ಯ ಎಂದು ರಾಜ್ಯ ಬಯಲಾಟ ಕಲಾವಿದರ ಸಂಘದ ಅಧ್ಯಕ್ಷ ವಿಶ್ವನಾಥ ಸಾಹುಕಾರ ತಿಳಿಸಿದರು.
ಉತ್ತರ ಪ್ರದೇಶದ ಅಯೋಧ್ಯೆ ಶ್ರೀರಾಮ ಮಂದಿರ ಆವರಣದಲ್ಲಿ ರಾಜ್ಯ ಬಯಲಾಟ ಕಲಾವಿದರ ಸಂಘ ಹಾಗೂ ಸಿರಗುಪ್ಪ ತಾಲೂಕಿನ ಬೂದುಗುಪ್ಪ ಗ್ರಾಮದ ಶ್ರೀ ಬಸವೇಶ್ವರ ಸಾಮಾಜಿಕ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಭರತನಾಟ್ಯ, ಬಯಲಾಟ, ದೊಡ್ಡಾಟ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನದಲ್ಲಿ ಮಾತನಾಡಿದರು.
ಬಳ್ಳಾರಿ ಜಿಲ್ಲೆಯ ಕಲಾವಿದರಿಂದ ಶ್ರೀ ರೇಣುಕಾ ಮಹಾತ್ಮೆ ಬಯಲಾಟ ಪ್ರದರ್ಶನಗೊಂಡಿತು.