The stall on the exit path was forced to be vacated.
ಹುಳಿಯಾರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹುಳಿಯಾರು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್‌ಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ಬೀದಿಬದಿ ವ್ಯಾಪಾರಿಗಳು ುಟ್‌ಪಾತ್ ಮೇಲೆ ವ್ಯಾಪಾರ ವಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ುಟ್‌ಪಾತ್ ವ್ಯಾಪಾರಿಗಳ ತೆರವು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಕೊರತೆ ನೀಗಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ವಾಣ ಮಾಡುವಂತೆ ಆಗ್ರಹಿಸಲಾಯಿತು.
ಪಟ್ಟಣದ ಬಸ್ ನಿಲ್ದಾಣ ಸೇರಿ ಮುಖ್ಯ ರಸ್ತೆಗಳ ುಟ್‌ಪಾತ್‌ಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ವ್ಯಾಪಾರಿಗಳು ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ಪಟ್ಟಣ ಗಬ್ಬುನಾರುತ್ತಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಿ, ುಟ್‌ಪಾತ್‌ಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ವೇದಿಕೆ ಒತ್ತಾಯಿಸಿತು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ, ಶ್ರೀದಲ್ಲೇ ವ್ಯಾಪಾರಿಗಳ ಸಭೆ ಕರೆದು ತಿಳಿವಳಿಕೆ ನೀಡಲಾಗುವುದು. ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿಬ್ಬಂದಿ ನೇಮಕ ಮತ್ತು ಸ್ವಚ್ಛತೆ :
ಹಲವು ವರ್ಷಗಳಿಂದ ಪಟ್ಟಣ ಪಂಚಾಯಿತಿಯಲ್ಲಿ ಅಗತ್ಯ ಸಿಬ್ಬಂದಿ ಮತ್ತು ಪೌರಕಾರ್ಮಿಕರ ಕೊರತೆ ಇರುವುದರಿಂದ ಆಡಳಿತಾತ್ಮಕ ಕೆಲಸಗಳು ಹಾಗೂ ಸ್ವಚ್ಛತಾ ಕಾರ್ಯ ಕುಂಠಿತಗೊಂಡಿದೆ. ಚರಂಡಿಗಳಲ್ಲಿ ನೀರು ನಿಂತು ರೋಗರುಜಿನಗಳು ಹರಡುವ ಭೀತಿ ಎದುರಾಗಿದೆ. ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ವಾಡಿ ಪಟ್ಟಣದಾದ್ಯಂತ ಸ್ವಚ್ಛತೆ ಕಾಪಾಡಬೇಕು ಎಂದು ನಿಯೋಗ ಮನವಿ ವಾಡಿತು. ಈ ಬಗ್ಗೆ ವಾತನಾಡಿದ ಮುಖ್ಯಾಧಿಕಾರಿಗಳು, ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.
ಪ್ಲಾಸ್ಟಿಕ್ ಮುಕ್ತ ಹುಳಿಯಾರು
ಪಟ್ಟಣದಲ್ಲಿ 40 ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದ್ದು, ಇದರಿಂದ ಪರಿಸರ ವಾಲಿನ್ಯ ಉಂಟಾಗುತ್ತಿದೆ. ಹೋಟೆಲ್ ವಾಲೀಕರು, ವ್ಯಾಪಾರಿಗಳು ಹಾಗೂ ಸಂಜೀವಿನಿ ಮಹಿಳಾ ಸಂಗಳ ಸಭೆ ನಡೆಸಿ ಪ್ಲಾಸ್ಟಿಕ್ ಬದಲಿ ವಸ್ತುಗಳ ಬಳಕೆಗೆ ಜಾಗತಿ ಮೂಡಿಸಬೇಕು ಎಂದು ವೇದಿಕೆ ಆಗ್ರಹಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ, ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಲಾಗಿದೆ, ಹೋಟೆಲ್ ಮತ್ತು ಅಂಗಡಿ ವಾಲೀಕರಿಗೆ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಲಾಗಿದೆ. ಸಂತೆ ವ್ಯಾಪಾರಿಗಳಿಗೆ ಸಹ ಎಚ್ಚರಿಕೆ ನೀಡಲಾಗಿದ್ದು, ಕೆಲವೆಡೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಹಲವೆಡೆ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ಕೆರೆ ಅಂಗಳದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಎಂದು ದಲಿತ ಸಹಾಯವಾಣಿಯ ಹನುಮಂತಪ್ಪ ಒತ್ತಾಯಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಳಿಯಾರು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್‌ಗೆ ಮನವಿ ಸಲ್ಲಿಸಲಾಯಿತು. ವೇದಿಕೆಯ ಪ್ರಮುಖರಾದ ರಾಮಕಷ್ಣಪ್ಪ, ಎನ್.ಇಂದಿರಮ್ಮ, ಜಯಲಕ್ಷ್ಮಮ್ಮ, ಮಮತಾ ನಟರಾಜ್, ನಂದಾವಾಡಗಿ ದಲಿತ ಸಹಾಯವಾಣಿಯ ಹನುಮಂತಪ್ಪ, ಕಾಮನಬಿಲ್ಲು ಫೌಂಡೇಶನ್‌ನ ಚನ್ನಕೇಶವ, ಶಂಕರೇಶ್ ಇದ್ದರು.