ಬಸವನಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಬರ ಅಧ್ಯಯನಕ್ಕಾಗಿ ಆಗಮಿಸಿದ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೈತರಿಂದ ಮನವಿ ಪತ್ರ ಸ್ವೀಕರಿಸಿದರು. 
ರಾಜ್ಯ

ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಲಿ

ಪ್ರಮುಖ ಮುಖ್ಯಾಂಶಗಳು

  • ಬರ ಅಧ್ಯಯನ ಮಾಡಿ ಅನ್ನದಾತರ ಸಮಸ್ಯೆ ಆಲಿಸಿದ ನಿಖಿಲ್ ಕುಮಾರಸ್ವಾಮಿ
ಬಸವನಬಾಗೇವಾಡಿ: ರಾಜ್ಯದ ಯಾವ ರೈತರು ಕೂಡ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದರು.
ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಮಂಗಳವಾರ ಬರ ಅಧ್ಯಯನಕ್ಕಾಗಿ ಆಗಮಿಸಿ, ನಂತರ ರೈತರಿಂದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯೇ ಸಂಪೂರ್ಣ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಭೀಕರ ಬರ ಆವರಿಸಿದೆ. ರಾಜ್ಯದ ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ ನಿಮ್ಮೂಂದಿಗೆ ಜೆಡಿಎಸ್ ಪಕ್ಷ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಇದ್ದಾರೆ. ನಿಮ್ಮ ಎಲ್ಲಾ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನಿಮಗೆ ನ್ಯಾಯ ದೊರಕಿಸುವ ಕೊಡುತ್ತವೆ. ರಾಜ್ಯ ಸರ್ಕಾರ ತಕ್ಷಣ ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿ ರೈತರಿಗೆ ಬೆಳೆ ಪರಿಹಾರ ಧನ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಶೇ. 70ರಷ್ಟು ರೈತರು ಕೃಷಿ ಅವಲಂಬಿತರಾಗಿ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಸರ್ಕಾರ ತಕ್ಷಣವೇ ಪ್ರತಿ ಎಕರೆಗೆ 25 ಸಾವಿರದಂತೆ ಬೆಳೆ ಪರಿಹಾರ ಹಣ ನೀಡಬೇಕು. ಕೇಂದ್ರ ಸಚಿವ ಕುಮಾರಸ್ವಾಮಿ 2 ಬಾರಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಕೋಲಾರ ಭಾಗದ ರೈತರು ಮತ್ತು ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾಗ ತಕ್ಷಣ ಅವರ ಕೆಂದ್ರದ ಕೃಷಿ ಸಚಿವರಿಗೆ ಮನವಿ ಮಾಡಿ ಮಾವು ಬೆಳೆಗಾರರ ಸಂಕಷ್ಟದಲ್ಲಿ ನೆರವಾಗಿದ್ದರು. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಹೇಳಿದರು.
ಸಿಎಂ ಡಿ.ಕೆ. ಶಿವಕುಮಾರ ಸರ್ಕಾರದಲ್ಲಿ ಕೃಷಿ ಸಚಿವರು ಇಲ್ಲ. ಇನ್ನು ಸಚಿವ ಸಂಪುಟವೇ ವಿಸ್ತರಣೆ ಆಗಿಲ್ಲ ಇನ್ನು ರೈತರ ಸಮಸ್ಯೆ ಆಲಿಸಲು ಸರ್ಕಾರಕ್ಕೆ ಸಾಧ್ಯವೇ? ಮೊದಲು ಈ ಭಾಗದಲ್ಲಿಂದ ಬರ ಪರಿಸ್ಥಿತಿ ಅಧ್ಯಯನ ಮಾಡಲು ಪ್ರಾರಂಭಿಸಿದ್ದು ನಮ್ಮ ತಂಡ. ಸಮಗ್ರ ಮಾಹಿತಿ ಪಡೆದು ವರದಿ ಮಾಡಿ ರಾಜ್ಯಪಾಲರಿಗೆ ಮತ್ತು ಅಧಿವೇಶನದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ಶಾಸಕರು ಸರ್ಕಾರದ ಗಮನ ಸೆಳೆಯುತ್ತಾರೆ ಎಂದು ಹೇಳಿದರು.
ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ರೈತರು ಹೋರಾಟ ಕುಳಿತಾಗ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಸರ್ಕಾರ ಭೂಮಿ ಸರ್ವಗೆ ಮುಂದಾಗಿರುವ ಕ್ರಮ ಸರಿಯಲ್ಲ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂಡಮಾನ, ನಿಕೋಬಾರದ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡುವರು
ಬಿಡದಿಯಲ್ಲಿ ರೈತರ ಫಲವತ್ತಾದ ಭೂಮಿಯಲ್ಲಿ ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಮಾತನಾಡಿ ತಮ್ಮ ಪಕ್ಷದವರಿಗೆ
ತಿಳಿಹೇಳುವ ಕೆಲಸ ಮಾಡಬೇಕು ಎಂದು ಹೇಳಿದರು.
ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಪುಗೌಡ ಪಾಟೀಲ ಮಾತನಾಡಿ, ವಿಜಯಪುರ ಜಿಲ್ಲೆಗೆ ಒಂದು ಬಾರಿ ಅತಿವೃಷ್ಟಿ ಇನ್ನೊಂದು ಬಾರಿ ಬರಗಾಲ ಹೀಗೆ ಒಂದಲ್ಲ ಒಂದು ಸಮಸ್ಯೆಯಲ್ಲಿ ಈ ಭಾಗದ ರೈತರು ತಮ್ಮ ಬದುಕನ್ನು ಕಟ್ಟಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಈ ಬಾರಿ ಸಂಪೂರ್ಣ ಬರ ಆವರಿಸಿದೆ ಸರ್ಕಾರ ರೈತರ ನೆರವಿಗೆ ಧಾವಿಸಬೇಕೆಂದು ಹೇಳಿದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಶಾಸಕ ರಾಜುಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಮಾಜಿ ಶಾಸಕರಾದ ಸುರೇಶ ಬಾಬು, ದೇವಾನಂದ್ ಚವಾಣ್, ದೊಡ್ಡನಗೌಡ ಪಾಟೀಲ, ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ್ ಕೊಟ್ರೆಶೆಟ್ಟಿ, ರವಿ ಪಟ್ಟಣಶೆಟ್ಟಿ, ಸಚಿನಗೌಡ ಪಾಟೀಲ, ಅಪ್ಸರಾಬೇಗಂ ಚಪ್ಪರಬಂದ, ರೈತರು ಭಾಗವಹಿಸಿದ್ದರು.