The state government's decision is welcome. 
ರಾಜ್ಯ

ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತರ್ಹ

ತುಮಕೂರು ಡೆಸ್ಕ್
ಕೊರಟಗೆರೆ: ಮೂರು ದಶಕದ ಒಳಮೀಸಲಾತಿ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿರ್ಧಾರಕ್ಕೆ ದಲಿತ ಮುಖಂಡರು ಕೃತಜ್ಞತೆ ಸಲ್ಲಿಸಿದ್ದಾರೆ.
ಪಟ್ಟಣದ ರಾಜೀವ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡ ವಾಲೆ ಚಂದ್ರಯ್ಯ ವಾತನಾಡಿ, ವಿಧಾನಸಭಾ ಚುನಾವಣೆಯ ವೇಳೆ ನೀಡಿದ್ದ ಭರವಸೆಯನ್ನು ರಾಜ್ಯ ಸರ್ಕಾರ ಈಡೇರಿಸಿರುವುದು ಸಾವಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದರು.
ಒಳಮೀಸಲಾತಿ ಜಾರಿಯ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಒಮ್ಮತದೊಂದಿಗೆ ಕೈಗೊಳ್ಳಲಾಗಿದೆ. ಇದು ದಲಿತ ಸಮುದಾಯದ ದೀರ್ಕಾಲದ ಹೋರಾಟಕ್ಕೆ ಸಾರ್ಥಕತೆ ತಂದಿದೆ ಎಂದು ಅಭಿಪ್ರಾಯಪಟ್ಟರು.
ಕೆಲವು ಸಂಟನೆಗಳ ಮುಖಂಡರು ಸಾರ್ವಜನಿಕ ಕಾರ್ಯಕ್ರಮಗಳನ್ನು ಅಡ್ಡಿಪಡಿಸುವ ಮೂಲಕ ಅಶಾಂತಿ ಸೃಷ್ಟಿಸಲು ಮುಂದಾಗಿರುವುದು ಸರಿಯಲ್ಲ. ಇಂತಹ ಟನೆಗಳು ಮುಂದುವರಿದರೆ ದಲಿತ ಸಮುದಾಯ ಗೃಹ ಸಚಿವರ ಬೆಂಬಲಕ್ಕೆ ನಿಂತು ಹೋರಾಟ ನಡೆಸಲು ಸಿದ್ಧವಾಗಿದೆ ಎಂದು ಎಚ್ಚರಿಸಿದರು.