ಡಾ.ಶರಣಪ್ರಕಾಶ ಪಾಟೀಲ್ ವೈದ್ಯಕಿಯ ಶಿಕ್ಷಣ ಸಚಿವ
- ಉಭಯ ಸದನಗಳಲ್ಲಿ ನಿರ್ಣಯ
- ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿಕೆ
ಕಲಬುರಗಿ: ಅನೇಕ ವರ್ಷಗಳಿಂದ ನೀಟ್ ಪರೀಕ್ಷೆಯಲ್ಲಿ ಅನೇಕ ಗೊಂದಲ ಕಾಣಿಸುದ್ದು, ಕೇಂದ್ರ ಸರ್ಕಾರಕ್ಕೆ ಅಚ್ಚುಕಟ್ಟಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪರೀಕ್ಷೆ ನಡೆಸಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಕರ್ನಾಟಕ ಜತೆ ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳ ಸೇರಿ ದಕ್ಷಿಣ ರಾಜ್ಯಗಳು ರ್ನಿಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿವೆ. ನೀಟ್ ಪರೀಕ್ಷೆ, ಫಲಿತಾಂಶ ಪ್ರಕಟ, ಕೌನ್ಸೆಲಿಂಗ್ ಹೀಗೆ ಎಲ್ಲ ಹಂತ ನಿರ್ವಹಿಸುವ ಹೊಣೆ ಆಯಾ ರಾಜ್ಯಗಳಿಗೆ ನೀಡಬೇಕು. ಆಗಲೇ ನಿಗದಿತ ಅವಧಿಯಲ್ಲಿ ಪ್ರಕ್ರಿಯೆ ಸುಸೂತ್ರ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಅವರು ಶುಕ್ರವಾರ ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು.
ಈ ಬಾರಿ 550 ವೈದ್ಯಕಿಯ ಯುಜಿ ಮತ್ತು 578 ಪಿಜಿ ಸೀಟ್ ಹೆಚ್ಚಳಕ್ಕೆ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಸಮ್ಮತಿ ಸೂಚಿಸಿದೆ. ಬಾಗಲಕೋಟೆ, ರಾಮನಗರದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭಿಸುವ ಉದ್ದೇಶವಿದೆ. ಆದರೆ ಎನ್ಎಂಸಿ ನಿಗದಿತ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿದಲ್ಲಿ ಅನುಕೂಲವಾಗಲಿದೆ ಎಂದರು.
ಈ ವರ್ಷವೂ ವೈದ್ಯಕಿಯ ಕೋರ್ಸ್ಗಳ ಶುಲ್ಕದಲ್ಲಿ ಹೆಚ್ಚಳ ಮಾಡಿಲ್ಲ. ಕಲಬುರಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಕೆಲಸ ಪ್ರಗತಿಯಲ್ಲಿದ್ದು, ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಏಜೆನ್ಸಿ ಹೇಳಿದೆ. 200 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಆರು ತಿಂಗಳಲ್ಲಿ ನಿರ್ಮಾಣಗೊಳ್ಳಲಿದೆ. ಕ್ರಿಟಿಕಲ್ ಕೇರ್ ಆಸ್ಪತ್ರೆ ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟದ ಅನುಮತಿ ದೊರೆತಿದೆ. ಅತಿ ಶ್ರೀ ಟೆಂಡರ್ ಕರೆಯಲಾಗುವುದು. ರ್ಬನ್ ಆಸ್ಪತ್ರೆ ಕಟ್ಟಡ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಇಂದಿರಾಗಾಂಧಿ ಚೈಲ್ಡ್ ಕೇರ್ ಇನ್ಸ್ಟಿಟ್ಯೂಟ್, ಡಯಾಬಿಟಾಲಜಿ ಕೇಂದ್ರ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿವೆ ಎಂದರು.
"
ನೀಟ್ 2ನೇ ಸಲ ಪರೀಕ್ಷೆ ಆಗಿದ್ದು, ತಕ್ಷಣ ಫಲಿತಾಂಶ ಪ್ರಕಟಿಸಿ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ವಿಳಂಬವಾದರೆ ವಿದ್ಯಾರ್ಥಿಗಳಿಗೂ ತೊಂದರೆ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಂಭೀರ ಪರಿಗಣಿಸಿ ಆದ್ಯತೆ ಮೇರೆಗೆ ಈ ಕಾರ್ಯ ಚುರುಕುಗೊಳಸಬೇಕು.
— > ಡಾ.ಶರಣಪ್ರಕಾಶ ಪಾಟೀಲ್ ವೈದ್ಯಕಿಯ ಶಿಕ್ಷಣ ಸಚಿವ