The work was completed over the weekend.
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆಯುತ್ತಿರುವ ಹೇಮಾವತಿ ನೀರಾವರಿ ಕಾಮಗಾರಿ ವಿಳಂಬದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದ ಸ್ಥಳಿಯ ರೈತರು, ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜುಲೈ ಮೊದಲ ವಾರಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಹಿಂದೆ ಹೇಮಾವತಿ ನಾಲೆ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಗಮನಿಸಿದ ರೈತರು, ಜೂ.5ರಂದು ತಾಲೂಕಿನಲ್ಲಿ ಬೃಹತ್ ಹೋರಾಟ ನಡೆಸಲು ತೀಮಾರ್ನಿಸಿದ್ದರು. ರೈತರ ಬೇಡಿಕೆಗೆ ಸ್ಪಂದಿಸಿದ ತಹಸೀಲ್ದಾರ್ ಮಮತಾ ಅವರು, ಶುಕ್ರವಾರ ಹುಳಿಯಾರು ಸಮೀಪದ ನವಿಲೆಯಲ್ಲಿ ಎಇಇ ಹಾಗೂ ಕಾಮಗಾರಿಯ ಗುತ್ತಿಗೆದಾರರನ್ನು ಕರೆಸಿ ರೈತರೊಂದಿಗೆ ನೇರ ಸಂವಾದ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಗುತ್ತಿಗೆದಾರರು, ನಾಲೆಯ ಕೆಲಸವನ್ನು ನಿಗದಿತ ಕಾಲಮಿತಿಯೊಳಗೆ ಮುಗಿಸಿಕೊಡುವುದಾಗಿ ಒಪ್ಪಿಕೊಂಡಿದ್ದಾರೆ. ಜುಲೈ ಮೊದಲ ವಾರಾಂತ್ಯದೊಳಗೆ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಿ ರೈತರಿಗೆ ನೀರು ಲಭ್ಯವಾಗುವಂತೆ ಮಾಡುವುದಾಗಿ ತಿಳಿಸಿದರು.
ಗುತ್ತಿಗೆದಾರರ ಭರವಸೆಯ ಮೇರೆಗೆ, ರೈತ ಸಂಘಟನೆಯು ತಮ್ಮ ನಿಗದಿತ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಿದೆ. ಆದರೆ, ಗುತ್ತಿಗೆದಾರರು ನೀಡಿದ ಮಾತಿನಂತೆ ಕೆಲಸ ನಡೆಯದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಸಿದರು. ತಹಸೀಲ್ದಾರರ ಕಚೇರಿಯಲ್ಲಿ ನಡೆದ ಈ ಸಭೆಯ ನಂತರ, ಕಾಮಗಾರಿ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಪ್ರತಿ 15 ದಿನಕ್ಕೊಮ್ಮೆ ಸಭೆ ಸೇರಿ ಪರಿಶೀಲಿಸಲು ನಿರ್ಧರಿಸಲಾಗಿದೆ.