Ebola virus  
ರಾಜ್ಯ

ರಾಜ್ಯದಲ್ಲಿ ಎಬೋಲಾ ಇಲ್ಲ, ಆತಂಕ ಬೇಡ

ಪ್ರಮುಖ ಮುಖ್ಯಾಂಶಗಳು

  • * ವದಂತಿಗಳಿಗೆ ಕಿವಿಗೊಡದಿರಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದ್ದು, ಮಹಿಳೆಗೆ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈರಸ್ ಕುರಿತು ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಅನಗತ್ಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಶಂಕಿತ ಎಬೋಲಾ ಲಕ್ಷಣಗಳು ಕಂಡು ಬಂದ ಕೂಡಲೇ ತಪಾಸಣೆ ನಡೆಸಲಾಯಿತು. ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ ಎಂದಿದ್ದಾರೆ.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ಸರ್ಕಾರದ ಆದ್ಯತೆಯಾಗಿದೆ. ಆರೋಗ್ಯ ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ಸವಾಲು ಎದುರಿಸಲು ಇಲಾಖೆ ಸಂಪೂರ್ಣ ಸಜ್ಜಾಗಿದೆ ಎಂದು ತಿಳಿಸಿದ್ದಾರೆ. ಜನರು ಇಲಾಖೆ ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ, ಸರ್ಕಾರ ಮತ್ತು ಇಲಾಖೆ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ ಎಂದು ಮನವಿ ಮಾಡಿದ್ದಾರೆ.