ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರು ಹಾಗೂ ಮೇವು ಪೂರೈಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಽಕಾರಿ ಸಂಗಪ್ಪ ಎಂ. ಮಾತನಾಡಿದರು.
ಬಾಗಲಕೋಟೆ: ಬೇಸಿಗೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಮೇವು ಪೂರೈಕೆಯಲ್ಲಿ ಅಭಾವ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಽಕಾರಿ ಸಂಗಪ್ಪ ಎಂ.ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರು ಹಾಗೂ ಮೇವು ಪೂರೈಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಪರಿಶೀಲಿಸಿ, ಮುಂದಿನ ಎಷ್ಟು ದಿನಗಳ ವರೆಗೆ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತದೆ ಅರಿತುಕೊಳ್ಳಬೇಕು. ಅದನ್ನು ಗಮನಕ್ಕೆ ಇಟ್ಟುಕೊಂಡು ಮುಂಜಾಗ್ರತಾ ಕ್ರಮಕೈಗೊಳ್ಳಲು ಅಽಕಾರಿಗಳಿಗೆ ಸೂಚನೆ ನೀಡಿದರು.
ನಗರ ಪ್ರದೇಶ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಽಕಾರಿಗಳು ಬಾಗಲಕೋಟೆ, ರಬಕವಿ-ಬನಹಟ್ಟಿ, ಜಮಖಂಡಿ, ಮುಧೋಳ ನಗರಸಭೆ, ತೇರದಾಳ, ಮಹಾಲಿಂಗಪುರ ಪುರಸಭೆ, ಕೆರೂರ, ಬೀಳಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ ೩೧ ವರೆಗೆ ಹಾಗೂ ಇಳಕಲ್ಲ ಪುರಸಭೆ, ಬಾದಾಮಿ, ಗುಳೇದಗುಡ್ಡ, ಹುನಗುಂದ ಪುರಸಭೆ, ಕಮತಗಿ, ಅಮೀನಗಡ, ಬೆಳಗಲಿ, ಲೋಕಾಪುರ, ಶಿರೂರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜೂ.೩೦ ವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಇರುವದಿಲ್ಲ ಅಂತ ಸಂಬAಽಸಿದ ಅಽಕಾರಿಗಳು ಸಭೆಗೆ ತಿಳಿಸಿದರು.
ಜಿ.ಪಂ ಸಿಇಒ ಶಶಿಧರ ಕುರೇರ ಅವರು ಜಿಲ್ಲೆಯಲ್ಲಿ ೧೯೬ ಗ್ರಾಮ ಪಂಚಾಯಿತಿಗಳಿದ್ದು, ೫೯೭ ಹಳ್ಳಿ ಹಾಗೂ ೧೦೦೬ ಜನವಸತಿಗಳಿವೆ. ೩೯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ಒಟ್ಟು ೪೦೨ ಹಳ್ಳಿಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಘಟಪ್ರಭಾ ನದಿ ಅವಲಂಭಿತ ೧೨, ಮಲಪ್ರಭಾ ನದಿ ಅವಲಂಬಿತ ೪ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳಿವೆ. ಈಗಾಗಲೇ ಏ. ೨ ರಂದು ಘಟಪ್ರಭಾ ನದಿಗೆ ೧.೧೦ ಟಿಎಂಸಿ ನೀರನ್ನು ಬಿಡುಗಡೆ ಮಾಡಿದ್ದು, ಆನದಿನ್ನಿ ಬ್ಯಾರೇಜಗೆ ನೀರು ತಲುಪಿದ್ದು, ಯಾವುದೇ ಸಮಸ್ಯೆ ಇರುವದಿಲ್ಲ ಎಂದು ಹೇಳಿದರು.
ಏ.೧೦ ರಂದು ಮಲಪ್ರಭಾ ನದಿಗೆ ೧ ಟಿಎಂಸಿ ನೀರು ಬಿಡುಗಡೆಗೊಳಿಸಿದ್ದು, ಏ.೧೫ ರಂದು ಶಿವಯೋಗ ಮಂದಿರದ ಬ್ಯಾರೇಜಗೆ ತಲುಪಿದ್ದು, ಇನ್ನು ೧೫ ಬ್ಯಾರೇಜ ದಾಟಿ ಹಡಗಲಿ ಬ್ಯಾರೇಜಗೆ ತಲುಪಲು ಬಾಕಿ ಇರುತ್ತದೆ. ನೀರು ಬಿಡುಗಡೆಯಿಂದ ಎಲ್ಲ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳು ಚಾಲ್ತಿಯಲ್ಲಿರುತ್ತವೆ. ಚಿಕ್ಕಪಡಸಲಗಿ ಬ್ಯಾರೇಜ ಅಡಿಯಲ್ಲಿ ೩ ಎಂವಿಎಸ್ ಯೋಜನೆಗಳಿದ್ದು, ೨೭ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವದಿಲ್ಲ.
ಸದ್ಯದ ಪರಿಸ್ಥಿತಿಯಲ್ಲಿ ಚಿಕ್ಕಪಡಸಲಗಿ ಬ್ಯಾರೇಜನಿಂದ ಏಪ್ರೀಲ್ ಅಂತ್ಯದವರೆಗೆ ಮಾತ್ರ ನೀರು ಸರಬರಾಜು ಮಾಡಬಹುದಾಗಿದ್ದು, ಮೇ ಮಾಹೆಯಲ್ಲಿ ಹಿಪ್ಪರಗಿ ಬ್ಯಾರೇಜದಿಂದ ೦.೫ ಟಿಎಂಸಿ ನೀರು ಬಿಡುಗಡೆಗೊಳಿಸಿದಲ್ಲಿ ೨೭ ಗ್ರಾಮಗಳಿಗೆ ಜೂನ್ ಅಂತ್ಯವರೆಗೆ ನೀರು ಸರಬರಾಜು ಮಾಡಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಎಪ್ರೀಲ್ ತಿಂಗಳಲ್ಲಿ ೫೨ ಗ್ರಾಮ ಹಾಗೂ ಮೇ ತಿಂಗಳಲ್ಲಿ ೬೨ ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾಗಿದ್ದು, ತೊಂದರೆ ನಿವಾರಣೆಗೆ ಈಗಾಗಲೇ ೧೧೧ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ. ಸದ್ಯ ಗುಳೇದಗುಡ್ಡ ತಾಲೂಕಿನ ಚಿಮ್ಮಲಗಿ, ಇಳಕಲ್ಲ ತಾಲೂಕಿನ ಚಿಕ್ಕಕೊಡಗಲಿ ಗ್ರಾಮದಲ್ಲಿ ತೊಂದರೆಯಾಗಿದ್ದು, ಖಾಸಗಿ ಕೊಳವೆಬಾವಿ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಪೂರೈಸಲಾಗುತ್ತಿದೆ. ಪ್ರಸಕ್ತ ಸಾಲಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳಿಗೆ ಮುಂಜಾಗ್ರತೆ ಕ್ರಮವಾಗಿ ೨೦೬ ಕಾಮಗಾರಿಗಳಿಗೆ ೬೧೧.೮೯ ಲಕ್ಷಗಳಿಗೆ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ತಿಳಿಸಿದರು.
ಜಾನುವಾರುಗಳಿಗೆ ಅಗತ್ಯವಾದ ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಶು ಸಂಗೋಪನಾ ಇಲಾಖೆ ಅಽಕಾರಿಗಳಿಗೆ ಸೂಚನೆ ನೀಡಿದರು. ಪಶು ಆಹಾರ ದಾಸ್ತಾನುಗಳನ್ನು ಸಿದ್ದವಾಗಿಡಲು ಹಾಗೂ ಅಗತ್ಯವಿರುವ ಕಡೆಗಳಿಗೆ ಮೇವು ಬ್ಯಾಂಕ್ ತೆರೆಯಲು ಕ್ರಮವಹಿಸಲು ತಿಳಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಉಪವಿಭಾಗಾಽಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಗ್ರಾಮೀಣ ಕುಡಿಯುವ ನೀರಿನ ಯೋಜನೆ ಅಽಕಾರಿ ಆಕಾಶ ವಂದೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಽಕಾರಿಗಳು ಉಪಸ್ಥಿತರಿದ್ದರು.