ಚಿನ್ನಾಭರಣ ಕದ್ದ 24ಗಂಟೆಯೊಳಗೆ ಕಳ್ಳ ಲಾಕ್ jewelry
ಶಿಡ್ಲಘಟ್ಟ: ದೇವಸ್ಥಾನದ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಗ್ರಾಮಾಂತರ ಪೊಲೀಸರು ಟನೆ ನಡೆದ 24 ಗಂಟೆಯೊಳಗೆ ಬಂಧಿಸಿದ್ದಾರೆ. jewelry
ಅದೇ ಗ್ರಾಮದ ಮುನಿರಾಜು (42) ಬಂಧಿತ.
ಜೂ.18ರಂದು ಚಿಕ್ಕದಾಸೇನಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿ ಬೈರಮ್ಮ ಮಧ್ಯಾಹ್ನ ಮನೆಗೆ ಬೀಗ ಹಾಕಿ, ಕೀ ಅನ್ನು ಮೆಟ್ಟಿಲಿನ ಕೆಳಗೆ ಇಟ್ಟು ಹೋಗಿದ್ದರು. ಮಧ್ಯಾಹ್ನ ಮನೆಗೆ ವಾಪಸ್ ಬಂದು ನೋಡಿದಾಗ ಮನೆಯ ಬೀಗ ತೆಗೆದಿರುವುದು ಗಮನಕ್ಕೆ ಬಂದಿದೆ. ಬೀರುವಿನಲ್ಲಿದ್ದ 85 ಗ್ರಾಂ ಬಂಗಾರದ ಒಡವೆಗಳು ಕಳುವಾಗಿವೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಪ್ರತ್ಯೇಕ ತಂಡ ರಚಿಸಿ, ಖಚಿತ ಮಾಹಿತಿ ಮೇರೆಗೆ ಅದೇ ಗ್ರಾಮದ ಮುನಿರಾಜುನ್ನು ಬಂಧಿಸಲಾಗಿದೆ. 85 ಗ್ರಾಂ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಕುಶಲ್ ಚೌೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗನ್ನಾಥ್ ರೈ, ಚಿಂತಾಮಣಿ ಉಪ&ವಿಭಾಗದ ಪ್ರಭಾರ ಡಿವೈಎಸ್ಪಿ ಪ್ರಕಾಶ್ ರೆಡ್ಡಿ ಮಾರ್ಗದರ್ಶನದಲ್ಲಿ ಶಿಡ್ಲಟ್ಟ ವೃತ್ತದ ಸಿಪಿಐ ಜೆ.ಎನ್.ಆನಂದಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಗ್ರಾಮಾಂತರ ಠಾಣೆ ಎಸ್.ಐ. ಸುನೀಲ್ಕುಮಾರ್, ಸಿಬ್ಬಂದಿ ಸಂದೀಪ್, ಮುರಳಿಕೃಷ್ಣ, ರವೀಂದ್ರ, ಆಂಜನೇಯ, ನಾಗರಾಜ, ಅಂಬರೀಷ್, ಮಂಜುನಾಥ ಮತ್ತು ಲಕ್ಷಿ$್ಮ ಅವರ ತಂಡ ಆರೋಪಿಯನ್ನು ಪತ್ತೆಹಚ್ಚಿದೆ.