- ಮಾಜಿ ಶಾಸಕ ರಾಜಕುಮಾರ ಪಾಟೀಲ್ ವ್ಯಂಗ್ಯ
- ರೈತರಿಗೆ ತ್ರೀ ಫೇಸ್ ವಿದ್ಯುತ್ ನೀಡದ ಸರ್ಕಾರ
ಕಲಬುರಗಿ: ಮೂರು ವರ್ಷಗಳಲ್ಲಿ ನಮ್ಮ ಸಾಧನೆ ಇಂಥದ್ದೆಂದು ಕಾಂಗ್ರೆಸ್ ಮುಖಂಡರು ಹೇಳಲಿ. ಮೂರು ವರ್ಷದಲ್ಲಿ ಮುನ್ನೂರು ವೈಫಲ್ಯ ಕಂಡಿರುವ ಸರ್ಕಾರವಿದು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಗರಣಗಳು ನಿಮ್ಮ ಸಾಧನೆಯೇ? ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಲೂಟಿ, ಒಬ್ಬ ಸಚಿವ ಜೈಲಿಗೆ ಹೋದ ಎಂಬುದು ಸಾಧನೆಯೇ ? ಎಸ್ಇಪಿ, ಟಿಎಸ್ಪಿ ಹಣ ದುರುಪಯೋಗ ಸಾಧನೆಯೇ ? ರೈತರ ಪಂಪ್ಸೆಟ್ಗಳಿಗೆ 3 ಫೇಸ್ ವಿದ್ಯುತ್ ನೀಡುತ್ತಿಲ್ಲ. 3 ವರ್ಷದಲ್ಲಿ ಕರ್ನಾಟಕದ ಜನರು ಹೆಮ್ಮೆ ಪಡುವಂತೆ, ತಲೆಯೆತ್ತಿ ನಿಲ್ಲುವಂತೆ, ಇಡೀ ದೇಶದಲ್ಲಿ ಹೇಳಿಕೊಂಡು ಓಡಾಡುವಂತೆ ಯಾವ ಕೆಲಸ ಮಾಡಿದ್ದೀರಿ ? ಎಂದು ಪ್ರಶ್ನಿಸಿದರು.
ರಾಜ್ಯದ ಸಮಗ್ರ ಸಾಲ 10 ಲ ಕೋಟಿ ರೂ. ದಾಟಿದೆ. ಸಾಲ ಮಾಡದೇ ಗ್ಯಾರಂಟಿ ಯೋಜನೆ ಕೊಡುವ ಸ್ಥಿತಿಯಲ್ಲಿಲ್ಲ. ಪೆಟ್ರೋಲ್& ಡೀಸೆಲ್ ಮೇಲೆ ರಾಜ್ಯ ಸರ್ಕಾರ ಹಾಕಿದ ಸೆಸ್ ಜಾಸ್ತಿಯೇ ಅಥವಾ ಕೇಂದ್ರ ಸರ್ಕಾರದ್ದು ಹೆಚ್ಚೇ ಎಂಬುದನ್ನು ನೋಡಿಕೊಳ್ಳಲಿ. ರಾಜ್ಯ ಸರ್ಕಾರ ಪೆಟ್ರೋಲ್& ಡೀಸೆಲ್ ಮೇಲೆ ಮೂರು ಬಾರಿ ಸೆಸ್ ಹಾಕಿದೆ. ಕೇಂದ್ರ ಸರ್ಕಾರ ಬೆಲೆ ಇಳಿಸಿದ ಮೇಲೂ ಸೆಸ್ ಹಾಕಿದ್ದು ಯಾಕೆ ? ಉಪ ಚುನಾವಣೆಯ ಗೆಲುವಿನ ಮರ್ಮ ಏನೆಂದು ಖಾಸಗಿಯಾಗಿ ಕೇಳಿದರೆ ಕಾಂಗ್ರೆಸ್ಸಿನವರೇ ಹೇಳುತ್ತಾರೆ. ಉಪ ಚುನಾವಣೆಯಲ್ಲಿ ಆಡಳಿತ ಪವು ತನ್ನೆಲ್ಲ ಸಂಪತ್ತು, ಸಂಪನ್ಮೂಲ ಬಳಸಿ ಜನಾದೇಶವನ್ನು ಖರೀದಿ ಮಾಡಿದೆ ಎಂದು ಕಿಡಿಕಾರಿದರು.
"
ಶೇ.60 ಕಮಿಷನ್, ಸರ್ಕಾರಿ ನೌಕರರ ಆತ್ಮಹತ್ಯೆ ಸಾಧನೆಯೇ? ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಕುರ್ಚಿಯಲ್ಲಿ ಎಷ್ಟು ದಿನ ಕುಳಿತಿರುತ್ತಾರೋ ಎಂಬ ಗ್ಯಾರಂಟಿ ಸಿದ್ದರಾಮಯ್ಯ ಅವರಿಗಿಲ್ಲ.
— > ರಾಜಕುಮಾರ ಪಾಟೀಲ್ ತೆಲ್ಕೂರ, ಮಾಜಿ ಶಾಸಕ