ಬೆಂಗಳೂರು: ಮಂಡ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳಂ ಮೂಲದ ಮೂವರು ದುರಂತವಾಗಿ ಸಾವಿಗೀಡಾಗಿದ್ದಾರೆ.
ಮೃತರನ್ನು ಕೋಝಿಕ್ಕೋಡ್‌ನ ಪುಥನ್ ಪುರ ನಿವಾಸಿ ಬಸಿಲ್ ಮುಹಮ್ಮದ್ ಅಲಿ (22), ಉರವಂಕುಲಂನ ಅರೀಕಾಡ್ ನಿವಾಸಿ ಪಿ.ಪಿ. ಲಿಫಾಸ್ (21) ಮತ್ತು ಓರ್ವ ಯುವತಿ ಎಂದು ಗುರುತಿಸಲಾಗಿದೆ. ಸದ್ಯದ ಮಟ್ಟಿಗೆ ಮೃತ ಯುವತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಮಾಧ್ಯಮಂ ವರದಿ ಮಾಡಿದೆ.
ಶನಿವಾರ (ನ.28) ಬೆಳಗ್ಗೆ 10.30ರಿಂದ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೂವರು ಕೋಝಿಕ್ಕೋಡ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಮಂಡ್ಯದ ಕಡೆ ಬರುವಾಗ ಕಾರು ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಅಪಘಾತದ ಭೀಕರತೆಗೆ ಮೂವರು ಸ್ಥಳದಲ್ಲೇ ಜೀವ ಬಿಟ್ಟಿದ್ದಾಗಿ ವರದಿಯಾಗಿದೆ.
ಚಾಲಕನಿಗೆ ನಿದ್ದೆ ಮಂಪರು ಆವರಿಸಿದ್ದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಪ್ರಾಥಮಿಕ ಹಂತದಲ್ಲಿ ಶಂಕಿಸಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಮೃತದೇಹಗಳನ್ನು ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಲಾಗಿದೆ,(ಏಜೆನ್ಸೀಸ್).