ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಇಂದು (ನ. 25) ಭೀಕರ ರಸ್ತೆ ಅಪಘಾತ(accident) ಸಂಭವಿಸಿದ್ದು, ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಮತ್ತು ಬೆಸ್ಕಾಂ ಎಂಡಿ ಮಹಾಂತೇಶ್ ಬಿಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.
ವಿಜಯಪುರದಿಂದ ಅಧಿಕಾರಿ ಮಹಾಂತೇಶ್ ಬಿಳಗಿ ತಮ್ಮ ಇನ್ನೋವಾ ಕಾರಿನಲ್ಲಿ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಹಾಗೆಯೇ ಶಂಕರ ಬಿಳಗಿ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.