ರಾಜ್ಯ

ಬೈಕ್ ಗೆ ಟಿಪ್ಪರ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ರಾಯಲ್ ಎನ್ ಫೀಲ್ಡ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ಬುಧವಾರ ಕಮಲಾಪುರದಲ್ಲಿ ಜರುಗಿದೆ.
ಕಲಬುರಗಿ ನಗರದ ಖಮರ್ ಕಾಲೋನಿಯ ನಿವಾಸಿ ಮಹ್ಮದ್ ಅಹಮದ್ ಮೃತ ದುರ್ದೈವಿ.
ಕಲಬುರಗಿಯಿಂದ ಹುಮನಾಬಾದ ಕಡೆಗೆ ಹೊರಟಿದ್ದ ಬೈಕ್ , ಹುಮನಾಬಾದ ಕಡೆಯಿಂದ ಕಲಬುರಗಿ ಕಡೆಗೆ ಹೊರಟಿದ್ದ ಟಿಪ್ಪರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ್ ಸ್ಥಳದಲ್ಲೇ ಕೊನೆಯುಸಿರೆಳೆದರು.
ಸ್ಥಳಕ್ಕೆ ಕಮಲಾಪುರ ಸಿಪಿಐ ಶಿವಶಂಕರ ಸಾಹು , ಕಮಲಾಪುರ ಪಿಎಸ್ಐ ಸುಖಾನಂದ ಸಿಂಗೆ ಭೇಟಿ ನೀಡಿ ಪರಿಶೀಲಿಸಿದ್ದು ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.