Tired of conflict, commits suicide
ಚಿಕ್ಕಬಳ್ಳಾಪುರ: ತಾಲೂಕಿನ ಗುಂಡ್ಲಗುಕರಿಯಲ್ಲಿ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗ್ರಾಮದ ಮುನಿರಾಜು(42) ಮೃತ. ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸಂಧಾನ ನಡೆದಿದ್ದರೂ ಸಮಸ್ಯೆ ಬಗೆಹರಿದಿರಲಿಲ್ಲ.
ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.