ರಾಮದುರ್ಗ ನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಸಚಿನ ಕೆ., ಅಶೋಕ ಕುಲಗೋಡ, ಎಸ್.ವಿ.ಕಲ್ಯಾಣಶೆಟ್ಟಿ ಇತರರಿದ್ದರು.
ವಿಜಯವಾಣಿ ಸುದ್ದಿಜಾಲ ರಾಮದುರ್ಗ
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಅಲ್ಲದೆ, ಶರೀರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ತಂಬಾಕು ಸೇವನೆ ತ್ಯಜಿಸಿ ಕುಟುಂಬದೊಂದಿಗೆ ನೆಮ್ಮದಿ ಜೀವನ ಸಾಗಿಸಬೇಕು ಎಂದು ಧರ್ಮಸ್ಥಳ ಸಂಸ್ಥೆ ತಾಲೂಕು ಯೋಜನಾಧಿಕಾರಿ ಸಚಿನ ಕೆ. ಹೇಳಿದರು.
ಬಾನಕಾರ ಪೇಟೆಯ ಬನಶಂಕರಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಸಂದ ಸದಸ್ಯರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ಸೌಲ ಸೌಲಭ್ಯ ಸೇರಿದಂತೆ ವಿವಿಧ ಮಹತ್ವಾಕಾಂ ಯೋಜನೆ ಜಾರಿಗೊಳಿಸಿದೆ. ಜನರು ಅನುಕೂಲ ಪಡೆಯಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರುದ್ರಪ್ಪ ವಜ್ಜರಮಟ್ಟಿ ಮಾತನಾಡಿ, ದುಶ್ಚಟಗಳ ಪರಿಣಾಮವಾಗಿ ಇಂದು ಬಹಳಷ್ಟು ಕುಟುಂಬಗಳು ಬೀದಿಪಾಲಾಗುತ್ತಿವೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸೋಣ ಎಂದು ತಿಳಿಸಿದರು. ಅಶೋಕ ಕುಲಗೋಡ, ಸಂಪನ್ಮೂಲ ವ್ಯಕ್ತಿ ಎಸ್.ವಿ.ಕಲ್ಯಾಣಶೆಟ್ಟಿ, ರಮೇಶ ಜಲಗೇರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸಂದ ಸದಸ್ಯರು ಇತರರಿದ್ದರು. ಮೇಲ್ವಿಚಾರಕ ವೈ.ಎಂ.ಬಸಪ್ಪ ನಿರೂಪಿಸಿದರು. ಸೇವಾ ಪ್ರತಿನಿಧಿ ನಿರ್ಮಲಾ ರಾವಳ ವಂದಿಸಿದರು.