ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಸಮೀಪದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಸಿದ್ಧತೆಯನ್ನು ಜಿಲ್ಲಾ ಅಧಿಕಾರಿ ಎ.ಬಿ.ಬಸವರಾಜು ಪರಿಶೀಲಿಸಿದರು. 
ರಾಜ್ಯ

ಇಂದು ಶ್ರೀ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ / TUBAGERE

ತೂಬಗೆರೆ : ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಡಿ.25ರಂದು ಬ್ರಹ್ಮರಥೋತ್ಸವ ನಡೆಯಲಿದ್ದು, ಜಿಲ್ಲಾಡಳಿತ ಜಾತ್ರೆಗೆ ಸಕಲ ಸಿದ್ಧತೆ ಕೈಗೊಂಡಿದೆ.
ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಬುಧವಾರ ಸಂಜೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ 12 ರಿಂದ 12.15 ಗಂಟೆಯೊಳಗೆ ಸಲ್ಲುಲು ಶುಭ ಮೂಹರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.
ಘಾಟಿ ಕ್ಷೇತ್ರಕ್ಕೆ ಆಗಮಿಸಲು ಪ್ರಮುಖವಾಗಿ ಎರಡು ರಸ್ತೆ ಸಂಪರ್ಕಗಳಿದ್ದು, ಮಾಕಳಿ ಹಾಗೂ ಕಂಟನಕುಂಟೆ ರಸ್ತೆಗಳಲ್ಲಿ ಸ್ವಚ್ಚತೆ ಕಾರ್ಯ, ಫುಟ್​ ಪಾತ್​ ಒತ್ತುವರಿ ತೆರವು ಮಾಡಲಾಗಿದೆ. ಇಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ. ದೇವಾಲಯ ಸುತ್ತಮುತ್ತಲಿನ ಫುಟ್​ ಪಾತ್​ ಮೇಲಿನ ಅಂಗಡಿಗಳನ್ನು ತೆರವುಮಾಡಲಾಗಿದ್ದು, ಭಕ್ತರ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿದೆ.
ಸುಂಕ ವಿನಾಯಿತಿ: ಜನವರಿ 31ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ. ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು 50 ರೂಪಾಯಿಯ ವಿಶೇಷ ದರ್ಶನ ವ್ಯವಸ್ಥೆ ಇರಲಿದೆ. ಡಿ.28ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಇರಲಿದೆ.