ಕೊಳ್ಳೇಗಾಲ್ದ ಡಾ.ವಿಷ್ಣುವರ್ಧನ್ ರಸ್ತೆಯಲ್ಲಿ ಬೈಕ್‌ಗಳನ್ನು ರಸ್ತೆಯಲ್ಲೇ ನಿಲುಗಡೆ ಮಾಡಿರುವುದು. 
ರಾಜ್ಯ

ವಾಹನ ಅಡ್ಡಾದಿಡ್ಡಿ ನಿಲುಗಡೆಯಿಂದ ಸಂಚಾರಕ್ಕೆ ತೊಂದರೆ

ಪ್ರಮುಖ ಮುಖ್ಯಾಂಶಗಳು

  • ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುವ ವಾಹನ
  • ಸಂಚಾರಕ್ಕೆ ತೊಂದರೆ
ಕೊಳ್ಳೇಗಾಲ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುವ ವಾಹನಗಳಿಂದ ಸಂಚಾರಕ್ಕೆ ತೊಂದರೆಯಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ,ಡಾ.ರಾಜ್‌ಕುಮಾರ್ ರಸ್ತೆ, ಡಾ.ವಿಷ್ಣುವರ್ದನ್ ರಸ್ತೆಯಲ್ಲಿ ನಿತ್ಯ ಎಲ್ಲಿಂದರಲ್ಲಿ ಬೈಕ್, ಕಾರು ಸೇರಿದಂತೆ ಇತರ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸಲಾಗುತ್ತಿದೆ. ಈ ರಸ್ತೆಗಳಲ್ಲಿ ಬ್ಯಾಂಕ್, ಹೋಟೆಲ್, ಮೆಡಿಕಲ್, ಬಟ್ಟೆ ಅಂಗಡಿ, ದಿನಸಿ ಅಂಗಡಿ, ಬಟ್ಟೆ ಅಂಗಡಿ.. ಹೀಗೆ ಎಲ್ಲ ರೀತಿಯ ಮಳಿಗೆಗಳಿವೆ. ಪ್ರತಿದಿನ ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದಿಂದ ಸಾವಿರಾರು ಜನರು ಭೇಟಿ ನೀಡುತ್ತಾರೆ. ಈ ವೇಳೆ ರಸ್ತೆಯ ಎರಡೂ ಬದಿಯಲ್ಲಿ ರಸ್ತೆಗೆ ಹೊಂದಿಕೊಂಡಂತೆ ವಾಹನಗಳನ್ನು ನಿಲ್ಲಿಸಿ ವ್ಯಾಪಾರ ವಹಿವಾಟು ಮಾಡುತ್ತಾರೆ. ಇದರಿಂದ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.
ಅಡ್ಡಾದಿಡ್ಡಿ ನಿಲ್ಲುವ ವಾಹನಗಳಿಗೆ ಕಡಿವಾಣ ಹಾಕಲು ಪೊಲೀಸರು ವಾರದ 7 ದಿನಗಳಲ್ಲಿ ರಸ್ತೆಯ ಯಾವ ಬದಿಯಲ್ಲಿ ವಾಹನ ಪಾಕಿರ್ಂಗ್ ಮಾಡಬೇಕೆಂಬ ಸೂಚನ ಫಲಕ ಹಾಕಿದ್ದಾರೆ. ಆದರೆ ಜನರು ಈ ನಿಯಮವನ್ನು ಗಾಳಿಗೆ ತೂರಿ ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ.ಈ ಬಗ್ಗೆ ಪಟ್ಟಣ ಪೊಲೀಸರು ಗಮನಹರಿಸಿ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಕ್ರಮವಹಿಸಬೇಕಿದೆ.