ದೇವದುರ್ಗ ತಾಲೂಕು ಲಿಂಗದಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. 
ರಾಜ್ಯ

ಬಸ್ ಸೌಲಭ್ಯಕ್ಕಾಗಿ ಸಂಚಾರ ತಡೆ

JAGADEESH KUMBAR
ದೇವದುರ್ಗ: ಜಾಲಹಳ್ಳಿ ಸಮೀಪದ ಲಿಂಗದಹಳ್ಳಿಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಶುಕ್ರವಾರ ಬಸ್ ಸಂಚಾರ ತಡೆದು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಲಿಂಗದಹಳ್ಳಿಯಿಂದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಿ ಬರುತ್ತಾರೆ. ಆದರೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯವಿಲ್ಲ.   ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದ ಕಾರಣ ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ತಡವಾಗಿ ಹೋಗುವ ಸ್ಥಿತಿ ಎದುರಾಗಿದೆ. ಶಾಲಾ, ಕಾಲೇಜಿಗೆ ಹೋಗಲು ತುಂಬ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚುವರಿ ಬಸ್ ಓಡಿಸಬೇಕು. ಶಾಲೆ-ಕಾಲೇಜುಗಳಿಗೆ ಹೋಗಲು ಬಸ್ ಲಭ್ಯವಾಗಬೇಕು ಎಂದು ಆಗ್ರಹಿಸಿದರು. 
ದೇವದುರ್ಗ ಸಾರಿಗೆ ಘಟಕದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಬಸ್‌ಗಳ ಸಮಯ ಪಾಲನೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.