- ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ರೈಲು
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಭ್ರಮದ ಸ್ವಾಗತ
ಕಲಬುರಗಿ: ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ರೈಲು ಕಲ್ಯಾಣ ಕರ್ನಾಟಕದ ಕಲಬುರಗಿ ಮಾರ್ಗವಾಗಿ ಸಂಚರಿಸಲಿರುವುದು ಈ ಭಾಗದ ಜನರಲ್ಲಿ ಸಂತಸ ಮನೆಮಾಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಕೆಕೆಸಿಸಿಐ ಸ್ವಾಗತಿಸಿದೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚಿಗೆ ಮುಂಬೈ&ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ ಸ್ಲೀಪರ್ ರೈಲು ಘೋಷಣೆ ಮಾಡಿದ್ದರು. ಆ ಸಂದರ್ಭದಲ್ಲಿ ರೈಲು ಸಂಚರಿಸುವ ಮಾರ್ಗ ಸ್ಪಷ್ಟಪಡಿಸದ ಕಾರಣ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿತ್ತು.
ಕಲಬುರಗಿ-ಬೆಂಗಳೂರು ನಡುವೆ ಉತ್ತಮ ಹಾಗೂ ವೇಗವಾದ ರೈಲು ಸಂಪರ್ಕ ಕಲ್ಪಿಸಬೇಕು ಎಂಬುದು ಈ ಭಾಗದ ಜನತೆ ಹಾಗೂ ಕೈಗಾರಿಕೆಗಳ ದೀರ್ಕಾಲದ ಬೇಡಿಕೆಯಾಗಿದ್ದು, ಈ ಕುರಿತು ಕೆಕೆಸಿಸಿಐ ನಿರಂತರವಾಗಿ ಕೇಂದ್ರ ರೈಲ್ವೆ ಸಚಿವಾಲಯದ ಗಮನ ಸೆಳೆಯುತ್ತ ಬಂದಿದೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯ ಸಂಸತ್ ಭವನದ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಇತ್ತೀಚಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ, ಕಲಬುರಗಿ&ಬೆಂಗಳೂರು ನಡುವೆ ಹೊಸ ರೈಲು ಸೇವೆ ಪ್ರಾರಂಭಿಸುವಂತೆ ಬಲವಾಗಿ ಮನವಿ ಮಾಡಲಾಗಿತ್ತು.
ಕೆಕೆಸಿಸಿಐ ಅಧ್ಯ ಶರಣಬಸಪ್ಪ ಎಂ.ಪಪ್ಪಾ ಅವರಿಗೆ ದೂರವಾಣಿ ಕರೆ ಮಾಡಿರುವ ಸಚಿವ ಪ್ರಹ್ಲಾದ್ ಜೋಶಿ ಮುಂಬೈ&ಬೆಂಗಳೂರು ವಂದೇ ಭಾರತ್ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸಲಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವನ್ನು ಸಂಪರ್ಕಿಸಲಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ, ಪ್ರಹ್ಲಾದ್ ಜೋಶಿ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಬೆಳವಣಿಗೆಯನ್ನು ಕೆಕೆಸಿಸಿಐ ಐತಿಹಾಸಿಕ ಸಾಧನೆ ಎಂದು ಪರಿಗಣಿಸುತ್ತದೆ. ಇದರ ಮೂಲಕ ಮುಂಬೈ-ಕಲಬುರಗಿ-ಬೆಂಗಳೂರು ನಡುವಿನ ಸಂಪರ್ಕ ಹೆಚ್ಚು ಬಲವಾಗುತ್ತದೆ. ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮಗಳಿಗೆ ಉತ್ತೇಜನ ಸಿಗಲಿದೆ. ಪ್ರಯಾಣಿಕರಿಗೆ ಸುಗಮ ಹಾಗೂ ವೇಗವಾದ ಸಂಚಾರ ಸಾಧ್ಯವಾಗಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ದೊಡ್ಡ ಉತ್ತೇಜನ ದೊರೆಯಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೆಕೆಸಿಸಿಐ ಕೃತಜ್ಞತೆ ಸಲ್ಲಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶದ ಮೂಲಸೌಕರ್ಯ, ಸಂಪರ್ಕ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಮುಂದಿನ ದಿನಗಳಲ್ಲಿಯೂ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಿದೆ ಎಂದು ಸಂದ ಅಧ್ಯಕ್ಷ ಶರಣಬಸಪ್ಪ ಪಪ್ಪ, ಕಾರ್ಯದರ್ಶಿ ಶಿವರಾಜ ಇಂಗಿನಶೆಟ್ಟಿ ತಿಳಿಸಿದ್ದಾರೆ.
ಕಲಬುರಗಿ&ಬೆಂಗಳೂರು ಮಧ್ಯೆ ರೈಲುಗಳ ಸಂಚಾರದಲ್ಲಿ ಹೆಚ್ಚಳ ಮಾಡಬೇಕು, ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಹಲವು ಬಾರಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ ಒತ್ತಡ ಹೇರಲಾಗಿತ್ತು. ಇದರ ಭಾಗವಾಗಿ ಕೇಂದ್ರ ಸರ್ಕಾರ ವಂದೇ ಭಾರತ್ ಸ್ಲೀಪರ್ ರೈಲು ಒದಗಿಸಿದೆ. ಕೇಂದ್ರದ ನಿರ್ಧಾರಕ್ಕೆ ಕೃತಜ್ಞತೆಗಳು.
ಕೋಟ್ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣಿಕರ ಒತ್ತಡ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜತೆಗೆ ವಿಮಾನ ಸಂಚಾರವೂ ಸ್ಥಗಿತಗೊಂಡಿರುವ ನಿಮಿತ್ತ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದರು. ಈ ಸಂಕಷ್ಟ ಕಾಲದಲ್ಲಿ ಬೆಂಗಳೂರು-ಮುಂಬೈ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸುವಂತೆ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರಕ್ಕೆ ಅನಂತ ಕೃತಜ್ಞತೆಗಳು.